ETV Bharat / state

ಮಹರ್ಷಿ ವಾಲ್ಮೀಕಿಗೆ ಅವಮಾನ ಮಾಡಿದ ಆರೋಪಿಗಳ ಗಡಿಪಾರಿಗೆ ಆಗ್ರಹಿಸಿ ಪ್ರತಿಭಟನೆ - ಶ್ರೀ ಮಹರ್ಷಿ ವಾಲ್ಮೀಕಿ ಅವರಿಗೆ ಅವಮಾನ ಸುದ್ದಿ

ಶ್ರೀ ಮಹರ್ಷಿ ವಾಲ್ಮೀಕಿ ಅವರಿಗೆ ಅವಮಾನ ಮಾಡಿದ ಆರೋಪಿಗಳನ್ನು ರಾಜ್ಯದಿಂದ ಗಡಿಪಾರು ಮಾಡಬೇಕೆಂದು ಜಿಲ್ಲಾ ವಾಲ್ಮೀಕಿ ನಾಯಕ ಸಂಘ ಯಾದಗಿರಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿತು.

protest in yadgiri on valmiki issue
ಪ್ರತಿಭಟನೆ
author img

By

Published : Sep 16, 2020, 10:57 PM IST

ಯಾದಗಿರಿ: ಶ್ರೀ ಮಹರ್ಷಿ ವಾಲ್ಮೀಕಿ ಅವರಿಗೆ ಅವಮಾನ ಮಾಡಿದ ಆರೋಪಿಗಳನ್ನು ರಾಜ್ಯದಿಂದ ಗಡಿಪಾರು ಮಾಡಬೇಕೆಂದು ಜಿಲ್ಲಾ ವಾಲ್ಮೀಕಿ ನಾಯಕ ಸಂಘ ಯಾದಗಿರಿಯಲ್ಲಿಂದು ಪ್ರತಿಭಟನೆ ನಡೆಸಿತು.

ಪ್ರತಿಭಟನೆ
ನಗರದ ತಹಶೀಲ್ದಾರ್​ ಕಛೇರಿಯಿಂದ ಜಿಲ್ಲಾಧಿಕಾರಿ ಕಛೇರಿವರೆಗೆ ಬೃಹತ್ ಪ್ರತಿಭಟನಾಕಾರರು ಮೆರವಣಿಗೆ ನಡೆಸಿದ್ರು. ಈ ವೇಳೆ ಪ್ರತಿಭಟನಾನಿರತರು ಹಾಗೂ ಪೊಲೀಸರ ನಡುವೆ ಸುಭಾಷ್ ವೃತ್ತದ ಬಳಿ ಮಾತಿನ ಚಕಮಕಿ ನಡೆಯಿತು. ಈ ವೇಳೆ ಪ್ರತಿಭಟನೆ ನಿರತರು ಬೈಕ್ ಸವಾರ ನೊಬ್ಬನ ಬೈಕ್ ಜಖಂಗೊಳಿಸಿ ಸವಾರನಿಗೆ ಹಲ್ಲೆ ನಡೆಸಿದ್ದು, ಈ ವೇಳೆ ಗಲಾಟೆ ‌ಕೂಡ ನಡೆದಿದೆ.

ನಂತರ ಪ್ರತಿಭಟನೆ ನಿರತರು ಜಿಲ್ಲಾಧಿಕಾರಿ ಕಚೇರಿ ‌ಮುಂದೆ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಯಾವುದೇ ಅನುಮತಿ ‌ಪಡೆಯದೆ ಪ್ರತಿಭಟನೆ ಮಾಡುವ ಜೊತೆ ಕೋವಿಡ್ ನಿಯಮ‌ ಪಾಲನೆ ಮಾಡದ್ದಕ್ಕೆ ಪೊಲೀಸರು ಪ್ರಕರಣ ದಾಖಲಿಸುವದಾಗಿ ಹೇಳಿದರು. ಇದರಿಂದ ಕೋಪಗೊಂಡು ಪೊಲೀಸರ ವಿರುದ್ಧ ಕೂಡ ಪ್ರತಿಭಟನಾಕಾರರು ಅಕ್ರೋಶ ವ್ಯಕ್ತಪಡಿಸಿದ್ದಾರೆ. ಎಸ್ಪಿ ಋಷಿಕೇಶ್ ಭಗವಾನ್ ಸೋನವಣೆ ಅವರ ವಾಹನ ಕೂಡ ತಡೆದರು. ಜಿಲ್ಲಾಧಿಕಾರಿ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ವಾಲ್ಮೀಕಿ ಸಮಾಜದ ಸ್ವಾಮಿ ವರದಾನೇಶ್ವರ ಸ್ವಾಮೀಜಿ ಕೂಡ ಪೊಲೀಸ್ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಸಚಿವ ಬಿ. ಶ್ರೀರಾಮುಲು ಅವರು ವಾತಾವರಣ ತಿಳಿಗೊಳಿಸಿ ಸ್ಥಳಕ್ಕಾಗಮಿಸಿದ ಜಿಲ್ಲಾಧಿಕಾರಿ ಡಾ. ರಾಗಪ್ರಿಯ ಅವರಿಗೆ ಪ್ರತಿಭಟನಾಕಾರರಿಂದ ಮನವಿ ಪತ್ರ ಸಲ್ಲಿಸಲಾಯಿತು. ನಂತರ ಮಾತನಾಡಿದ ರಾಮಲು ಅವರು, ಆರೋಪಿಗಳು ಪಾತಾಳದಲ್ಲಿ ಇದ್ದರು ಪತ್ತೆ ಹಚ್ಚಿ ಕಠಿಣ ಕ್ರಮಕೈಗೊಳ್ಳಬೇಕೆಂದು ಗೃಹ ಸಚಿವರಿಗೆ ಸೂಚಿಸಲಾಗಿದೆ ಎಂದರು..

ETV Bharat Logo

Copyright © 2025 Ushodaya Enterprises Pvt. Ltd., All Rights Reserved.