ಯಾದಗಿರಿ: ಸ್ಲಮ್ಗಳಲ್ಲಿ ವಾಸ ಮಾಡುತ್ತಿರುವ ಸ್ಲಮ್ ನಿವಾಸಿಗಳಿಗೆ ಸ್ಲಂ ಘೋಷಣೆ ಹಕ್ಕು ಪತ್ರ ನೀಡಿ ನಿವೇಶನ ನೀಡುವಂತೆ ಆಗ್ರಹಿಸಿ ಯಾದಗಿರಿಯಲ್ಲಿಂದು ಸಾವಿತ್ರಿಬಾಯಿ ಫುಲೆ ಮಹಿಳಾ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಿದ ಸಾವಿತ್ರಿಬಾಯಿ ಫುಲೆ ಮಹಿಳಾ ಸಂಘಟನೆ ಸದಸ್ಯರು ಸರ್ಕಾರ ಘೋಷಣೆ ಮಾಡಿರುವ ಸ್ಲಂ ನಿವಾಸಿಗಳಿಗೆ ನಿವೇಶನ ಹಕ್ಕು ಪತ್ರ ನೀಡಿ ಅನುಕೂಲ ಕಲ್ಪಿಸಿ ಕೊಡಬೇಕು ಎಂದು ಆಗ್ರಹಿಸಿದರು.
ನಗರದಲ್ಲಿ ಸುಮಾರು ವರ್ಷಗಳಿಂದ ಸ್ಲಂ ಗಳಲ್ಲಿ ವಾಸ ಮಾಡುತ್ತಿರುವ ಜನ ಗುಡಿಸಿಲಿನಲ್ಲಿ ವಾಸ ಮಾಡುತ್ತಿದ್ದು, ಅನೇಕಬಾರಿ ಜಿಲ್ಲಾಡಳಿತ ಮತ್ತು ಸರ್ಕಾರದ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಸರ್ಕಾರ ಕೂಡಲೇ ಬಡ ಸ್ಲಂ ಜನರಿಗೆ ನಿವೇಶನ ನೀಡಬೇಕು ಎಂದು ಒತ್ತಾಯಿಸಿದರು. ತಮ್ಮ ಬೇಡಿಕೆ ಈಡೇರಿಸುವವರೆಗೂ ಅನಿರ್ದಿಷ್ಟಾವಧಿ ಧರಣಿ ಮುಂದುವರೆಸಲಾಗುದೆಂದು ಧರಣಿ ನಿರತರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.