ETV Bharat / state

ಅಂಬೇಡ್ಕರ್​​ ನಿವಾಸದ ಮೇಲೆ ದಾಳಿ ಮಾಡಿದವರ ಗಡಿಪಾರಿಗೆ ಆಗ್ರಹ - Karnataka State Dalit sangharsha Committee

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೂಡಲೇ ಕಿಡಿಗೇಡಿಗಳ ಮೇಲೆ ಕ್ರಮ ಕೈಗೊಂಡು ಅವರನ್ನು ದೇಶದಿಂದ ಗಡಿಪಾರು ಮಾಡಬೇಕು ಮತ್ತು ಅಂಬೇಡ್ಕರ್ ಅವರ ಮನೆಗೆ ಬಿಗಿ ಭದ್ರತೆ ನೀಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

Protesters demand deportation those who vandalised Ambedkar residence
ಅಂಬೇಡ್ಕರ್​​ ನಿವಾಸದ ಮೇಲೆ ದಾಳಿ ಮಾಡಿದರ ಗಡಿಪಾರಿಗೆ ಪ್ರತಿಭಟನಾಕಾರರ ಆಗ್ರಹ
author img

By

Published : Jul 10, 2020, 5:47 PM IST

ಸುರಪುರ (ಯಾದಗಿರಿ): ಅಂಬೇಡ್ಕರ್ ನಿವಾಸದ ಮೇಲೆ ದಾಳಿ ವಿರೋಧಿಸಿ ತಾಲೂಕಿನ ಕೆಂಭಾವಿ ಹೋಬಳಿಯ ಉಪ ತಹಶೀಲ್ದಾರ್ ಕಚೇರಿ ಮುಂದೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ ಬಣ) ಸದಸ್ಯರು ಪ್ರತಿಭಟನೆ ನಡೆಸಿದರು.

ಮುಂಬೈನ ದಾದರ್​​​​​​ನಲ್ಲಿರುವ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮನೆಯ ಮೇಲೆ ದಾಂಧಲೆ ನಡೆಸಿದ ಕಿಡಿಗೇಡಿಗಳ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

ಅಂಬೇಡ್ಕರ್​​ ನಿವಾಸದ ಮೇಲೆ ದಾಳಿ ಮಾಡಿದವರ ಗಡಿಪಾರಿಗೆ ಆಗ್ರಹ

ಈ ಸಂದರ್ಭದಲ್ಲಿ ಮುಖಂಡರು ಮಾತನಾಡಿ, ಮುಂಬೈನ ದಾದರ್​ನಲ್ಲಿರುವ ರಾಜಗೃಹ ಮನೆಯ ಕಿಟಕಿ, ಬಾಗಿಲುಗಳನ್ನು ಧ್ವಂಸಮಾಡಿದ್ದಲ್ಲದೆ ಸಿಸಿಟಿವಿ ಪರಿಕರಗಳನ್ನು ಧ್ವಂಸ ಮಾಡಿ ಬಾಬಾ ಸಾಹೇಬರ ಅನುಯಾಯಿಗಳಿಗೆ ನೋವುಂಟು ಮಾಡಿದ್ದಾರೆ.

ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮನೆಯ ಮೇಲೆ ನಡೆಸಿದ ದಾಂಧಲೆ ಇಡೀ ಭಾರತದ ಸಂವಿಧಾನ ಪ್ರಿಯರ ಮೇಲೆ ನಡೆದ ಹಲ್ಲೆಯಾಗಿದೆ. ಆದ್ದರಿಂದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೂಡಲೇ ಕಿಡಿಗೇಡಿಗಳ ಮೇಲೆ ಕ್ರಮ ಕೈಗೊಂಡು ಅವರನ್ನು ದೇಶದಿಂದ ಗಡಿಪಾರು ಮಾಡಬೇಕು ಮತ್ತು ಅಂಬೇಡ್ಕರ್ ಅವರ ಮನೆಗೆ ಬಿಗಿ ಭದ್ರತೆ ನೀಡಬೇಕೆಂದು ಒತ್ತಾಯಿಸುತ್ತೇವೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.