ಸುರಪುರ: ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ರಾಜಗೃಹ ಮೇಲೆ ದಾಳಿ ಮಾಡಿದ ಗೂಂಡಾಗಳ ಬಂಧನಕ್ಕೆ ಒತ್ತಾಯಿಸಿ ದಲಿತ ಸೇನೆ ವತಿಯಿಂದ ಇಂದು ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ದಲಿತ ಸೇನೆ, ಅಂಬೇಡ್ಕರ್ ಮನೆಯ ಮೇಲೆ ದಾಳಿ ನಡೆಸಿದ ಗೂಂಡಾಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಂಬೇಡ್ಕರ್ ಜಗತ್ತಿನ ಅನೇಕ ರಾಷ್ಟ್ರಗಳ ಸಂವಿಧಾನ ಅಧ್ಯಯನ ಮಾಡಿ ಭಾರತಕ್ಕೆ ಒಂದು ಜಗತ್ಪ್ರಸಿದ್ಧವಾದ ಸಂವಿಧಾನವನ್ನು ರಚಿಸಿಕೊಟ್ಟವರು. ಅಂತಹ ಮಹಾನ್ ವ್ಯಕ್ತಿ ಬಾಳಿದ ಮುಂಬೈನ ದಾದರನಲ್ಲಿರುವ ಮನೆಯ ಮೇಲೆ ಗೂಂಡಾಗಳು ದಾಳಿ ನಡೆಸಿದ್ದು, ಅವರನ್ನೆಲ್ಲಾ ಈ ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು.
ಇನ್ನು ಪ್ರತಿಭಟನೆಯಲ್ಲಿ ಘೋಷಣೆ ಕೂಗಿದ ನಂತರ ಪ್ರಧಾನ ಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ಗ್ರೇಡ್-2 ತಹಸೀಲ್ದಾರ್ ಸೋಫಿಯಾ ಸುಲ್ತಾನರ ಮೂಲಕ ಪಿಎಂಗೆ ಸಲ್ಲಿಸಿದರು.