ಸುರಪುರ : ಬಾಗಲಕೋಟೆ ಜಿಲ್ಲೆಯಲ್ಲಿ ವಾಟ್ಸಾಪ್ ಗ್ರುಪ್ ಒಂದರಲ್ಲಿ ಶ್ರೀ ಮಹರ್ಷಿ ವಾಲ್ಮೀಕಿಯನ್ನು ಅವಮಾನಿಸಿದ ಫೋಟೊ ಹರಿಬಿಡಲಾಗಿದೆ ಎಂದು ಆರೋಪಿಸಿ ತಾಲೂಕು ಶ್ರೀ ಮಹರ್ಷಿ ವಾಲ್ಮೀಕಿ ಸಂಘದ ಮುಖಂಡರು ಪ್ರತಿಭಟನೆ ನಡೆಸಿದರು.
ನಗರದ ತಹಸೀಲ್ ಕಚೇರಿ ಮುಂದೆ ಸೇರಿದ ಅನೇಕ ಮುಖಂಡರು ಮಹರ್ಷಿ ವಾಲ್ಮೀಕಿ ಭಾವಚಿತ್ರ ವಿರೋಪಗೊಳಿಸಿ ಹರಿಬಿಟ್ಟಿದ್ದನ್ನು ಖಂಡಿಸಿ ಘೋಷಣೆಗಳನ್ನು ಕೂಗಿದರು.
ಈ ಸಂದರ್ಭದಲ್ಲಿ ಮುಖಂಡ ವೆಂಕಟೇಶ ಬೇಟೆಗಾರ ಮಾತನಾಡಿ, ಜಗತ್ತಿಗೆ ರಾಮಾಯಣದಂತಹ ಮಹಾಕಾವ್ಯವನ್ನು ಕೊಟ್ಟ ಮಹರ್ಷಿ ವಾಲ್ಮೀಕಿಯವರ ಭಾವಚಿತ್ರವನ್ನು ಅಶ್ಲೀಲವಾಗಿ ಮಾಡಿ ಅದನ್ನು ವಾಟ್ಸಪ್ ಜಾಲತಾಣದಲ್ಲಿ ಹರಿಬಿಟ್ಟಿರುವ ಹುಡುಗರನ್ನು ಕೂಡಲೇ ಬಂಧಿಸಿ ರಾಜ್ಯದಿಂದ ಗಡಿಪಾರು ಮಾಡಬೇಕು ಇಲ್ಲವಾದಲ್ಲಿ ನಮ್ಮ ಸಂಘಟನೆಯಿಂದ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದರು. ಬಳಿಕ ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ಗ್ರೇಡ್-2 ತಹಶೀಲ್ದಾರ್ ಸೂಫಿಯಾ ಸುಲ್ತಾನ್ ಅವರ ಮೂಲಕ ಸಲ್ಲಿಸಿದರು.