ಯಾದಗಿರಿ: ರಾಜ್ಯ ಸರ್ಕಾರ ಇತ್ತೀಚಿಗೆ ಜಾರಿಗೆ ತಂದಿರುವ ಭೂಸ್ವಾಧೀನ ಕಾಯ್ದೆ ವಿರೋಧಿಸಿ ಜಿಲ್ಲೆಯ ರೈತ ಸಂಘಟನೆಗಳಿಂದ ರಸ್ತೆ ತಡೆ ಚಳುವಳಿ ನಡೆಸುವ ಮೂಲಕ ಪ್ರತಿಭಟನೆ ನಡೆಸಲಾಯಿತು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರಿಂದ ಜಿಲ್ಲೆಯ ಶಹಪುರ ನಗರದ ಜೆಸ್ಕಾಮ್ ಕಚೇರಿಯಿಂದ ತಹಶೀಲ್ದಾರ್ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ಜಾರಿಗೊಳಿಸಿದ ಭೂಸ್ವಾಧೀನ ಕಾಯ್ದೆ ರೈತರಿಗೆ ಮಾರಕವಾಗಲಿದೆ. ಎಲ್ಲಾ ಭೂಮಿವುಳ್ಳವರ ಪಾಲಾಗುವ ಮುಲಕ ರೈತರು ಬೀದಿಗೆ ಬೀಳುವಂತಾಗುತ್ತದೆ.
ಈ ಕಾಯ್ದೆ ರೈತರ ಮರಣ ಶಾಸನವಾಗಿದ್ದು, ಕೂಡಲೇ ಸರ್ಕಾರ ಈ ಕಾಯ್ದೆ ವಾಪಸ್ ಪಡೆಯಬೇಕು ಎಂದು ಒಂದು ಗಂಟೆ ಕಾಲ ರಸ್ತೆ ತಡೆ ಚಳುವಳಿ ಧರಣಿ ನಡೆಸಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.
ಒಂದು ವೇಳೆ ಸರ್ಕಾರ ಈ ಕಾಯ್ದೆ ವಾಪಸ್ ಪಡೆಯದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಸ್ವರೂಪದ ಹೋರಾಟ ನಡೆಸಲಾಗುವದು ಅಂತ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.