ಸುರಪುರ(ಯಾದಗಿರಿ): ಸುರಪುರ ನಗರದ ಒಡ್ಡರಗಲ್ಲಿಯಲ್ಲಿ ಎರಡು ಗುಂಪುಗಳ ಮಧ್ಯೆ ಘರ್ಷಣೆ ನಡೆದಿದ್ದು ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.
ಗಾಯಗೊಂಡ ಎಲ್ಲರಿಗೂ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಮಾಜಿ ನಗರಸಭೆ ಸದಸ್ಯೆ ಶಾರದ ನಾಗಪ್ಪ ಕಟ್ಟಿಮನಿ ಎಂಬುವವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ಮನೆಗೆ ಬಂದು ಗಲಾಟೆ ಮಾಡಿ ಕಲ್ಲು, ಕಟ್ಟಿಗೆಯಿಂದ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಮುನ್ನೆಚ್ಚರಿಕಾ ಕ್ರಮವಾಗಿ ಒಡ್ಡರ ಓಣಿಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಸುರಪುರ ಪೊಲೀಸ್ ಠಾಣೆಯಲ್ಲಿ ಈ ಕುರಿತ ದೂರು ದಾಖಲಾಗಿದೆ.