ಸುರಪುರ: ಬೆಳಗಾವಿ ಜಿಲ್ಲೆಯ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣನವರ ಮೂರ್ತಿ ಪ್ರತಿಷ್ಠಾಪನೆಗೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಸುರಪುರ ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಸಂಘಟನೆಯ ನಗರ ಘಟಕದ ಕಾರ್ಯಾಧ್ಯಕ್ಷ ಯಲ್ಲಪ್ಪ ಕಲ್ಲೋಡಿ ಮಾತನಾಡಿ, ಈ ದೇಶಕ್ಕೆ ಸ್ವಾತಂತ್ರ್ಯ ದೊರೆಯಲೆಂದು ಮೊದಲು ಹೋರಾಟ ನಡೆಸಿದ ಕಿತ್ತೂರು ಸಂಸ್ಥಾನದ ಸೈನಿಕ ಸಂಗೊಳ್ಳಿ ರಾಯಣ್ಣ ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದರು. ಅವರು ಆರಂಭಿಸಿದ ಸ್ವಾತಂತ್ರ್ಯ ಹೋರಾಟ ನಂತರದ ಎಲ್ಲಾ ಹೋರಾಟಗಾರರಿಗೆ ಸ್ಫೂರ್ತಿಯಾಗಿದೆ.
ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಬೆಳಗಾವಿ ಜಿಲ್ಲೆಯ ಪೀರನವಾಡಿಯಲ್ಲಿ ರಾಯಣ್ಣನವರ ಜನುಮ ದಿನವಾದ ಭಾರತ ಸ್ವಾತಂತ್ರ್ಯ ದಿನ ಆಗಸ್ಟ್ 15ರಂದೇ ತೆರವುಗೊಳಿಸುವ ಮೂಲಕ ಅವಮಾನಿಸಿದ್ದಾರೆ. ಇದನ್ನು ಜಯ ಕರ್ನಾಟಕ ಸಂಘಟನೆ ಉಗ್ರವಾಗಿ ಖಂಡಿಸುತ್ತದೆ ಎಂದರು.
ಕೊಡಲೇ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣನವರ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು. ಇಲ್ಲವಾದಲ್ಲಿ ಸಂಘಟನೆಯಿಂದ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.