ಯಾದಗಿರಿ: ಮುಸ್ಲಿಂ ಬಾಂಧವರು ಈದ್ಗಾ ಮೈದಾನದಲ್ಲಿ ಅದ್ಧೂರಿಯಾಗಿ ರಂಜಾನ್ ಹಬ್ಬವನ್ನು ಆಚರಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂಭಾಗದಲ್ಲಿರುವ ಈದ್ಗಾ ಮೈದಾನದಲ್ಲಿ ಸೇರಿದ ಮುಸ್ಲಿಂ ಬಾಂಧವರು ಪರಸ್ಪರ ಒಬ್ಬರಿಗೊಬ್ಬರು ಅಪ್ಪಿಕೊಳ್ಳುವ ಮೂಲಕ ರಂಜಾನ್ ಹಬ್ಬದ ಶುಭಾಶಯ ಕೋರಿದರು. ಯುವಕರು, ವಯಸ್ಕರರು, ಚಿಣ್ಣರು ಸೇರಿದಂತೆ ಯಾವುದೇ ವಯೋಮಿತಿಯ ಭೇದ ಭಾವವಿಲ್ಲದೆ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು.
ನಂತರ ಸಂಪ್ರಾದಾಯಿಕವಾಗಿ ಹಿಂದೂಗಳಿಗೆ ಸುರಕ್ಮ ಹಾಗೂ ಊಟ ಮಾಡಿಸುವ ಮೂಲಕ ಹಿಂದೂ-ಮುಸ್ಲಿಂ ಏಕ್ ಹೈ ಎಂದು ಮುಸ್ಲಿಂ ಬಾಂಧವರು ರಂಜಾನ್ ಹಬ್ಬಕ್ಕೆ ಮುನ್ನಡಿ ಬರೆದರು. ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.