ಯಾದಗಿರಿ: ಜಿಲ್ಲೆಯಲ್ಲಿ ದಿನ ಕಳೆದಂತೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ರೆಮ್ಡೆಸಿವಿರ್ ಇಂಜೆಕ್ಷನ್ ಕೊರತೆ ಕೂಡ ಉಲ್ಬಣಗೊಂಡಿದೆ.
ಯಾದಗಿರಿ ಜಿಲ್ಲೆಯಲ್ಲಿ ಕೆವಲ 60 ರೆಮ್ಡೆಸಿವಿರ್ ಇಂಜೆಕ್ಷನ್ ಲಭ್ಯವಿದ್ದು, ಇಂಜೆಕ್ಷನ್ ಕೊರತೆ ಇದ್ದರೂ ಕೂಡ ಆರೋಗ್ಯ ಇಲಾಖೆ ಸರಿಯಾದ ಮಾಹಿತಿ ನೀಡುತ್ತಿಲ್ಲ ಅನ್ನೋ ಆರೋಪಗಳು ಕೇಳಿ ಬಂದಿವೆ. ಇದರಿಂದಾಗಿ ಈಗಿರುವ ಸೋಂಕಿತರಿಗೆ ರೆಮ್ಡೆಸಿವಿರ್ ಸಿಗುವುದೇ ಡೌಟ್ ಆಗಿದ್ದು, ಇಂದು ಮತ್ತೆ ಕೊರೊನಾ ಸೋಂಕಿತರು ಆಸ್ಪತ್ರೆಗೆ ಹೆಚ್ಚಿನ ಪ್ರಮಾಣದಲ್ಲಿ ದಾಖಲಾದರೆ, ರೆಮ್ಡೆಸಿವಿರ್ ಕೊರತೆಯಿಂದ ಸೋಂಕಿತರು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಹೆಚ್ಚಾಗಿದೆ.
ಮೊನ್ನೆಯಷ್ಟೆ ಕಲಬುರಗಿ ಸಂಸದ ಬೆಂಗಳೂರಿಗೆ ತೆರಳಿ 350 ರೆಮ್ಡೆಸಿವಿರ್ ಇಂಜೆಕ್ಷನ್ ತರುವ ಮೂಲಕ ರೋಗಿಗಳ ಹಿತ ಕಾಪಾಡಿದ್ರು. ಆದ್ರೆ ಯಾದಗಿರಿ ಜಿಲ್ಲೆಯಲ್ಲಿನ ರೆಮ್ಡೆಸಿವಿರ್ ಇಂಜೆಕ್ಷನ್ ಕೊರತೆ ಬಗ್ಗೆ ತಲೆಕೆಡಿಸಿಕೊಳ್ಳದ ಜನಪ್ರತಿನಿಧಿಗಳ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಸಾರ್ವಜನಿರು ಆಕ್ರೋಶ ವ್ಯಕ್ತಪಡಿಸಿದ್ದಾರೆ.