ಯಾದಗಿರಿ: ಜಿಲ್ಲೆಯಲ್ಲಿಂದು ಹೊಸದಾಗಿ 24 ಜನರಿಗೆ ಕೊರೊನಾ ಸೋಂಕು ಧೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 10,109 ಕ್ಕೆ ಏರಿಕೆಯಾಗಿದೆ.
ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದವರಲ್ಲಿ ಇಂದು 36 ಜನ ಸಂಪೂರ್ಣ ಗುಣಮುಖರಾಗಿ ಬಿಡುಗಡೆ ಹೊಂದುವ ಮೂಲಕ ಇದುವರೆಗೆ 9849 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಇಲ್ಲಿಯವರೆಗೆ ಒಟ್ಟು 61 ಜನ ಸಾವನ್ನಪ್ಪಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳಲ್ಲಿ 199 ಮಂದಿ ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಸಂಖ್ಯೆ ಗಣನೀಯವಾಗಿ ಇಳಿಮುಖವಾಗುತ್ತಿದ್ದು, ಯಾದಗಿರಿ ಜನರಲ್ಲಿ ಸ್ವಲ್ಪ ಮಟ್ಟಿಗೆ ನೆಮ್ಮದಿ ಮೂಡಿಸಿದೆ.