ETV Bharat / state

ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆಗೆ ಆಗ್ರಹಿಸಿ ಪ್ರತಿಭಟನೆ

author img

By

Published : Aug 18, 2020, 3:38 PM IST

ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ಸಂಘಟನೆ ಕಾರ್ಯಕರ್ತರು ಸುರಪುರ ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

protest in Surapur
ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

ಸುರಪುರ: ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆಗೆ ಆಗ್ರಹಿಸಿ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ಸಂಘಟನೆ ಕಾರ್ಯಕರ್ತರು ಸುರಪುರ ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ರಾಯಣ್ಣ ಮೂರ್ತಿ ಪ್ರತಿಷ್ಠಾಪನೆಗೆ ಆಗ್ರಹ: ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

ಸಂಘಟನೆಯ ನೇತೃತ್ವ ವಹಿಸಿದ್ದ ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ಅಧ್ಯಕ್ಷ ನಿಂಗಣ್ಣ ಚಿಂಚೋಡಿ ಮಾತನಾಡಿ, ಈ ದೇಶಕ್ಕೆ ಸ್ವಾತಂತ್ರ್ಯ ದೊರೆಯಲೆಂದು ಮೊದಲು ಹೋರಾಟ ನಡೆಸಿದ ಸಂಗೊಳ್ಳಿ ರಾಯಣ್ಣ ಬ್ರಿಟಿಷರಿಗೆ ಸಿಂಹ ಸ್ವಪ್ನವಾಗಿದ್ದರು‌. ಅವರು ಆರಂಭಿಸಿದ ಸ್ವಾತಂತ್ರ್ಯ ಹೋರಾಟ ನಂತರದ ಎಲ್ಲಾ ಹೋರಾಟಗಾರರಿಗೆ ಸ್ಫೂರ್ತಿಯಾಗಿದೆ‌. ಅಂತಹ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಬೆಳಗಾವಿ ಜಿಲ್ಲೆಯ ಪೀರನವಾಡಿಯಲ್ಲಿ ರಾಯಣ್ಣನವರ ಜನುಮ ದಿನವಾದ ಭಾರತ ಸ್ವಾತಂತ್ರ್ಯ ದಿನ ಆ. 15ರಂದೇ ತೆರವುಗೊಳಿಸುವ ಮೂಲಕ ಅವಮಾನಿಸಿದ್ದಾರೆ. ಇದನ್ನು ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ಉಗ್ರವಾಗಿ ಖಂಡಿಸುತ್ತದೆ.

ಕೂಡಲೇ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣನವರ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು. ಇಲ್ಲವಾದಲ್ಲಿ ಸಂಘಟನೆಯಿಂದ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ನಂತರ ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ಗ್ರೇಡ್-2 ತಹಶೀಲ್ದಾರ್ ಸೋಫಿಯಾ ಸುಲ್ತಾನ್ ಮೂಲಕ ಸಲ್ಲಿಸಿದರು. ಹೋರಾಟಕ್ಕೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಎನ್.ಮೂರ್ತಿ ಬಣ)ಬೆಂಬಲ ಸೂಚಿಸಿ ಭಾಗವಹಿಸಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.