ETV Bharat / state

ಬಿಜೆಪಿ ಸರ್ಕಾರದ ಆಡಳಿತ ಸಂಪೂರ್ಣ ಹಾದಿ ತಪ್ಪಿದೆ: ಸತೀಶ್ ಜಾರಕಿಹೊಳಿ - Satish Jarkiholi meeting

ಕಾಂಗ್ರೆಸ್ ಪಕ್ಷ ಮುಂದಿನ ದಿನಗಳಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ. ಬಿಜೆಪಿ ಪಕ್ಷದ ಆಡಳಿತ ಸಂಪೂರ್ಣ ಹಾದಿ ತಪ್ಪಿದ್ದು, ಜನರು ಈ ಸರ್ಕಾರದಿಂದ ರೋಸಿ ಹೋಗಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಸುರಪುರದಲ್ಲಿ ಹೇಳಿದ್ದಾರೆ.

Satish Jarkiholi
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
author img

By

Published : Dec 25, 2020, 10:33 AM IST

ಸುರಪುರ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯನ್ನು ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ಕಚೇರಿ ಆವರಣದಲ್ಲಿ ನಡೆಸಿದರು.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸತೀಶ್ ಜಾರಕಿಹೊಳಿ

ಸಭೆಯ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಮುಂದಿನ ದಿನಗಳಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ. ಬಿಜೆಪಿ ಪಕ್ಷದ ಆಡಳಿತ ಸಂಪೂರ್ಣ ಹಾದಿ ತಪ್ಪಿದ್ದು, ಜನರು ಈ ಸರ್ಕಾರದಿಂದ ರೋಸಿ ಹೋಗಿದ್ದಾರೆ. ನೈಟ್​ ಕರ್ಫ್ಯೂ ಕುರಿತು ಬಿಜೆಪಿಯವರಿಗೆ ಸ್ಪಷ್ಟತೆ ಇಲ್ಲ ಎಂದರು.

ಕಾಂಗ್ರೆಸ್ ಪ್ರಬಲ ವಿರೋಧ ಪಕ್ಷವಾಗಿ ಸರ್ಕಾರದ ವಿರುದ್ಧ ಹೋರಾಟ ನಡೆಸುವಲ್ಲಿ ಸೋತಿದೆಯೇ? ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಹಾಗೇನು ಇಲ್ಲ. ನಾವು ಹೋರಾಟ ಮಾಡುತ್ತಿದ್ದೇವೆ. ಆದರೆ ಸರ್ಕಾರ ನಡೆಸುವವರು ಯಾವುದಕ್ಕೂ ಗಮನ ನೀಡುತ್ತಿಲ್ಲ ಎಂದರು.

ಕಾಂಗ್ರೆಸ್ ಕೂಡ ಭೂ ಸುಧಾರಣಾ ಕಾಯ್ದೆಯನ್ನು ವಿರೋಧಿಸುತ್ತಿದೆ. ನಾವು ಎಲ್ಲಾ ಜಿಲ್ಲೆ, ತಾಲೂಕುಗಳಲ್ಲಿ ಹೋರಾಟ ಮಾಡಿದ್ದೇವೆ. ಸರ್ಕಾರ ರೈತರ ಬೇಡಿಕೆಗಳ ಈಡೇರಿಕೆಗೆ ಗಮನ ನೀಡದೆ ಆಡಳಿತ ನಡೆಸುವ ಮೂಲಕ ಅಹಂ ತೋರಿಸುತ್ತಿದೆ. ಇದಕ್ಕೆ ಮುಂದಿನ ದಿನಗಳಲ್ಲಿ ಜನರು ಉತ್ತರ ನೀಡುತ್ತಾರೆ. ನಮ್ಮ ಸರ್ಕಾರವಿದ್ದಾಗ ಎಸ್​ ಸಿ, ಎಸ್‌​ಟಿ ಸಮುದಾಯದವರಿಗೆ ಹೆಚ್ಚಿನ ಸಬ್ಸಿಡಿ ನೀಡುತ್ತಿದ್ದೆವು. ಆದರೆ ಈಗ ಅವೆಲ್ಲವನ್ನು ಕಡಿತಗೊಳಿಸಿರುವುದರಿಂದ ಸಮುದಾಯದ ಅಭಿವೃದ್ಧಿಗೆ ಹಿನ್ನಡೆ ಉಂಟು ಮಾಡುತ್ತಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಮುಖಂಡರಾದ ರಾಜಾ ರೂಪ ಕುಮಾರ್ ನಾಯಕ, ರಾಜಾ ವೇಣುಗೋಪಾಲ ನಾಯಕ, ವಿಠ್ಠಲ್ ಯಾದವ್, ನಿಂಗಣ್ಣ, ರಮೇಶ, ಅಬ್ದುಲ್ ಅಲೀಂ ಸೇರಿದಂತೆ ಅನೇಕರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.