ಯಾದಗಿರಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಇಲ್ಲಿಗೆ ಸಮೀಪದ ಮೋಟನಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಗಾಳೆಪ್ಪ ಪೂಜಾರಿ (40) ಎಂಬ ಆರೋಪಿಯನ್ನು ಪೋಕ್ಸೊ ಪ್ರಕರಣದಡಿ ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ನವೆಂಬರ್ 26ರಂದು ಆರೋಪಿ ಮೊಬೈಲ್ ಫೋನ್ನಲ್ಲಿ ಅಶ್ಲೀಲವಾಗಿ ಮಾತನಾಡಿದ ಬಗ್ಗೆ ವಿದ್ಯಾರ್ಥಿನಿ ದೂರು ನೀಡಿದ್ದರು. ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಾಘವೇಂದ್ರ ಭೇಟಿ ನೀಡಿ, ಪರಿಶೀಲಿಸಿ, ವರದಿ ನೀಡಿದ್ದರು. ವಿದ್ಯಾರ್ಥಿನಿಯರ ಸಮಾಲೋಚನೆ ನಡೆಸಿ, ಕ್ರಮ ಕೈಗೊಳ್ಳಲಾಗಿತ್ತು. ಆರೋಪಿಯನ್ನು ಪ್ರಾಂಶುಪಾಲ ಹುದ್ದೆಯಿಂದ ತೆಗೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಲೈಂಗಿಕ ಕಿರುಕುಳ ನೀಡಿರುವುದು ವಿಚಾರಣೆಯಿಂದ ದೃಢಪಟ್ಟಿದ್ದು, ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಿಇಒಗೆ ಸೂಚಿಸಿದ್ದು, ತನಿಖೆ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್ ತಿಳಿಸಿದ್ದಾರೆ.
ಇದನ್ನೂ ಓದಿ: ವಸತಿ ಶಾಲೆಯ ಮಕ್ಕಳಿಗೆ ಲೈಂಗಿಕ ಕಿರುಕುಳ.. ವಿದ್ಯಾರ್ಥಿನಿಯರಿಗೆ ಬ್ಯಾಡ್ ಟಚ್, ಪ್ರಾಂಶುಪಾಲ ಅರೆಸ್ಟ್