ಯಾದಗಿರಿ: ಬಿಜೆಪಿ ಮನೆಗೆ ಈಗ ಬೆಂಕಿ ಹೊತ್ತಿದೆ. ಬೆಂಕಿ ಹೊತ್ತಿದ ಬಿಜೆಪಿ ಮನೆಗೆ ಕಾಂಗ್ರೆಸ್ ಶಾಸಕರ‍್ಯಾರೂ ಹೊಗಲ್ಲ ಎಂದು ಕಾಂಗ್ರೆಸ್ ಶಾಸಕ ಶರಣಬಸಪ್ಪ ದರ್ಶನಾಪುರ ಹೇಳಿದ್ದಾರೆ.
ಬಿಜೆಪಿ ನಾಯಕರ ನಡುವೆ ಭಿನ್ನಮತ ಭುಗಿಲೆದ್ದಿದೆ. ಸರ್ಕಾರ ಉರುಳಿಸುವ ಪ್ರಯತ್ನಕ್ಕೆ ಕಾಂಗ್ರೆಸ್ ಕೈ ಹಾಕಲ್ಲ. ಅಲ್ಲದೇ, ಕಾಂಗ್ರೆಸ್ ಶಾಸಕರ‍್ಯಾರೂ ಬಿಜೆಪಿಗೆ ಹೋಗಲ್ಲ ಎಂದು ಸಚಿವ ರಮೇಶ್ ಜಾರಕಿಹೊಳಿಗೆ ಟಾಂಗ್ ಕೊಟ್ಟಿದ್ದಾರೆ.
ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದ ಶಾಸಕರು ಕಹಿ ಅನುಭವಿಸುತ್ತಿದ್ದಾರೆ. ಬಿಜೆಪಿ ಬೆಳವಣಿಗೆಯನ್ನು ಕಾಂಗ್ರೆಸ್ ಸೂಕ್ಷ್ಮವಾಗಿ ಗಮನಿಸುತ್ತಿದೆ. ಬಿಜೆಪಿ ಅತೃಪ್ತ ಶಾಸಕರು ಸಭೆ ನಡೆಸಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಸಮಾಧಾನಗೊಂಡ ಬಿಜೆಪಿ ಶಾಸಕರ ನಡೆ ಸರ್ಕಾರ ಬೀಳಿಸುವುದು, ಇಲ್ಲವೇ ಮುಖ್ಯ ನಾಯಕರ ಬದಲಾವಣೆ ಮಾಡುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ, ಕಾಂಗ್ರೆಸ್ ಆಪರೇಷನ್ ಹಸ್ತ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.