ಯಾದಗಿರಿ: ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ ನಿರಾಶ್ರಿತರ ಗೋಳು ಕೇಳಬೇಕಾದ ವಿಪಕ್ಷ ನಾಯಕ ಸಿದ್ದರಾಮಯ್ಯ, ಸಂತ್ರಸ್ತರ ಭೇಟಿ ನೆಪದಲ್ಲಿ ರೋಡ್ ಶೋ ನಡೆಸಿದ್ದಾರೆ.
ನಂತರ ವಡಗೇರಾ ತಾಲೂಕಿನ ನಾಯ್ಕಲ್ ಗ್ರಾಮದಲ್ಲಿ ಬೆಳೆ ಹಾನಿ ವೀಕ್ಷಣೆ ಮಾಡದೆ, ರಾಜ್ಯ ಹೆದ್ದಾರಿ ಮಧ್ಯದಲ್ಲಿಯೇ ವಾಹನ ನಿಲ್ಲಿಸಿ ಜನರತ್ತ ಕೈಬೀಸಿದರು. ಈ ವೇಳೆ ನಿರಾಶ್ರಿತರು ನಮಗೂ ಹೆಚ್ಚಿನ ಪರಿಹಾರ ಕಲ್ಪಿಸಬೇಕೆಂದು ನೋವು ತೋಡಿಕೊಳ್ಳಲು ಮುಂದಾದರು. ಈ ವೇಳೆ ಜನರ ಮಾತು ಕೇಳಿಸಿಕೊಳ್ಳದ ಅವರು, ರೋಡ್ ಶೋ ನಡೆಸಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ.