ಸುರಪುರ: ಬೆಂಗಳೂರಿನ ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿಯಲ್ಲಿ ನಡೆದ ಗಲಭೆ, ಪೊಲೀಸ್ ಠಾಣೆ ಮೇಲಿನ ದಾಳಿ ಹಾಗೂ ಪೊಲೀಸರ ಮೇಲಿನ ಹಲ್ಲೆ ಖಂಡಿಸಿ ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಆಂದೋಲ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುರಪುರ ತಾಲೂಕಿನ ಯಾಳಗಿ ಗ್ರಾಮದಲ್ಲಿ ಏರ್ಪಡಿಸಿದ್ದ ಶ್ರೀ ರೇಣುಕಾಚಾರ್ಯ ಮೂರ್ತಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇಶದಲ್ಲಿ ಎಸ್ಡಿಪಿಐ, ಪಿಎಫ್ಐ ಸೇರಿದಂತೆ ಅನೇಕ ಸಂಘಟನೆಗಳು ದೇಶದ್ರೋಹದ ಕೆಲಸದಲ್ಲಿ ತೊಡಗಿದ್ದು, ಸರ್ಕಾರ ಕೂಡಲೇ ಈ ಎಲ್ಲಾ ಸಂಘಟನೆಗಳನ್ನು ನಿಷೇಧಿಸುವಂತೆ ಆಗ್ರಹಿಸಿದರು.
ಧಾರವಾಡ ಜಿಲ್ಲೆಯ ಬೇಗೂರು ಗ್ರಾಮದಲ್ಲಿನ ಯುವತಿ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧ ಮಾತನಾಡಿ, ಇಂತಹ ಘಟನೆ ಮಾನವ ಸಮಾಜ ತಲೆ ತಗ್ಗಿಸವಂತಿದೆ. ಈ ಘಟನೆಯ ಆರೋಪಿಗೆ ಮರಣದಂಡನೆ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದರು.