ಯಾದಗಿರಿ: ರಾಮುಲು ಡಿಸಿಎಂ ಆಗಬೇಕೆನ್ನುವುದು ಜನರ ಅಭಿಪ್ರಾಯ. ನಾನದನ್ನು ತಿರಸ್ಕರಿಸುವುದಿಲ್ಲ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮಲು ಪರೋಕ್ಷವಾಗಿ ತಾವೂ ಕೂಡ ಡಿಸಿಎಂ ಸ್ಥಾನದ ಆಕಾಂಕ್ಷಿ ಎಂಬ ಅರ್ಥದಲ್ಲಿ ಹೇಳಿಕೆ ನೀಡಿದ್ದಾರೆ.
ಖಾಸಗಿ ಕಾರ್ಯಕ್ರಮದ ನಿಮಿತ್ತ ಅವರು ಶಹಪುರ ನಗರಕ್ಕೆ ಆಗಮಿಸಿದ್ದರು. ವೇಳೆ ಈ ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ನನಗೆ ಡಿಸಿಎಂ ಸ್ಥಾನ ನೀಡಬೇಕು ಎನ್ನುವುದು ಜನರ ಅಪೇಕ್ಷೆಯಾಗಿದೆ. ಜನರ ಮಾತನ್ನು ಸರ್ಕಾರ ಕೇಳುತ್ತದೆ ಎಂಬ ನಂಬಿಕೆಯೂ ಇದೆ. ಸೂಕ್ತ ಸಮಯದಲ್ಲಿ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ. ಡಿಸಿಎಂ ಸ್ಥಾನ ನೀಡದಿದ್ರೆ ಮುಂದೆ ನೋಡೋಣ ಎಂದರು.
ಇನ್ನ ವಾಲ್ಮೀಕಿ ಸಮಾಜಕ್ಕೆ 7.5 ಮೀಸಲಾತಿ ನೀಡುವ ವಿಚಾರವಾಗಿ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ ನೂರಕ್ಕೆ ನೂರು 7.5 ಮೀಸಲಾತಿ ಕೊಟ್ಟೇ ಕೊಡುತ್ತಾರೆ. ಮೀಸಲಾತಿ ಕೊಡದಿದ್ದರೆ ಶ್ರೀಗಳ ಮಾತಿಗೆ ನಮ್ಮ ಸಮಾಜದ ಎಲ್ಲಾ ಶಾಸಕರು ಬದ್ಧರಾಗಿದ್ದೇವೆ ಅಂತ ತಿಳಿಸಿದರು.
ಸ್ವಾಮೀಜಿಗಳ ಮಾತನ್ನು ಯಾವುದೇ ಕಾರಣಕ್ಕೂ ನಾವು ಮೀರುವುದಿಲ್ಲ. 7.5 ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಾಗುವುದಿಲ್ಲ. ಮೀಸಲಾತಿ ಘೋಷಣೆಗೆ ಯಾವುದೇ ದಿನಾಂಕ ನಿಗದಿಯಾಗಿಲ್ಲ. ಸರ್ಕಾರದ ನಡೆಯನ್ನು ಕಾದು ನೋಡುತ್ತೇವೆ. ಮುಖ್ಯಮಂತ್ರಿಗಳ ನೇತೃತ್ವವದ ಸರ್ಕಾರ ನಮ್ಮ ಬೇಡಿಕೆ ಈಡೇರಿಸುತ್ತದೆ ಅನ್ನೋ ನಂಬಿಕೆ ನಮಗಿದೆ ಎಂದರು.