ಯಾದಗಿರಿ : ಕೊರೊನಾ ಪಾಸಿಟಿವ್ ತಗುಲಿದ್ದ ಸ್ಟಾಫ್ ನರ್ಸ್‌ವೊಬ್ಬರು ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಇಂದು ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಜಿಲ್ಲೆಯ ನೂತನ ಜಿಲ್ಲಾಸ್ಪತ್ರೆಯ ಕೋವಿಡ್-19 ವಾರ್ಡ್ನಿಂದ 24 ವರ್ಷದ (ಪಿ-5062) ಸ್ಟಾಫ್‌ನರ್ಸ್ ಇಂದು ಬಿಡುಗಡೆಯಾಗಿ ಮನೆಗೆ ತೆರಳಿದ್ದಾರೆ.
ಜಿಲ್ಲೆಯ ವಡಗೇರಾ ತಾಲೂಕಿನ ಬೆಂಡೆಬೆಂಬಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೇವೆ ನಿರ್ವಹಿಸುತ್ತಿದ್ದ ವ್ಯಕ್ತಿಗೆ 8 ದಿನಗಳ ಹಿಂದೆ ಕೊರೊನಾ ಸೋಂಕು ತಗುಲಿತ್ತು. ಅವರನ್ನ ಚಿಕಿತ್ಸೆಗಾಗಿ ಜಿಲ್ಲೆಯ ನೂತನ ಜಿಲ್ಲಾಸ್ಪತ್ರೆಯ ಕೋವಿಡ್-19 ವಾರ್ಡ್ಗೆ ದಾಖಲಿಸಲಾಗಿತ್ತು. ಇದೀಗ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚೌಹಾಣ್ ಹಾಗೂ ಶಾಸಕ ವೆಂಕಟರೆಡ್ಡಿ ಮುದ್ನಾಳ್ ಅವರು ಗುಣಮುಖರಾದ ಸ್ಟಾಫ್ ನರ್ಸ್‌ಗೆ ಹೂಗುಚ್ಛ ನೀಡಿ ಮನೆಗೆ ಕಳುಹಿಸಿದ್ರು. ಇನ್ನು ಕಳೆದ 8 ದಿನಗಳಿಂದ ನಿರಂತರವಾಗಿ ಚಿಕಿತ್ಸೆ ನೀಡುತ್ತಾ ನಿಗಾವಹಿಸಿದ ಜಿಲ್ಲಾ ವೈದ್ಯಕೀಯ ಸಿಬ್ಬಂದಿಗೆ ಧನ್ಯವಾದಗಳು ಸಲ್ಲಿಸಿ ಸ್ಟಾಫ್ ನರ್ಸ್ ಮನೆಗೆ ತೆರಳಿದ್ರು.