ಯಾದಗಿರಿ: ಕೊರೊನಾ ಹೆಸರಲ್ಲಿ ರಾಜ್ಯ ಸರ್ಕಾರ ಲೂಟಿಗಿಳಿದಿದೆ. ಸರ್ಕಾರ ಕೋವಿಡ್ನಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಕೊರೊನಾ ವಾರಿಯರ್ಸ್ ಮತ್ತು ಸಾರ್ವಜನಿಕರಿಗೆ ರಕ್ಷಣೆ ಕೊಡುವುದನ್ನು ಬಿಟ್ಟು ಭ್ರಷ್ಟಾಚಾರಕ್ಕೆ ಇಳಿದಿದೆ ಎಂದು ಮಾಜಿ ಸಚಿವ ಪ್ರಿಯಾಂಕ ಖರ್ಗೆ ಆರೋಪಿಸಿದ್ದಾರೆ.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಜನರು ಸರ್ಕಾರದ ಕಾರ್ಯ ವೈಖರಿ ಬಗ್ಗೆ ಜಾಗೃತರಾಗಬೇಕಾಗಿದೆ. ಈ ಸರ್ಕಾರಕ್ಕೆ ಕೊರೊನಾ ಸೋಂಕು ತಗುಲಿದೆ ಅಂದರೆ ತಪ್ಪಾಗಲಾರದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರಕ್ಕೆ ರಾಜ್ಯದ ರಾಜ್ಯಧಾನಿ ಬೆಂಗಳೂರಿನ ಮೇಲೆ ಮಾತ್ರ ಕಾಳಜಿ. ರಾಜ್ಯದಲ್ಲಿ ಮತ್ತು ಕೇಂದ್ರದಲ್ಲಿ ವಿರೋಧ ಪಕ್ಷಗಳು ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡಿವೆ. ಆದರೆ ಈಗ ಭ್ರಷ್ಟಾಚಾರಕ್ಕೂ ಬೆಂಬಲ ನೀಡಿ ಅಂದರೆ ಅದು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.