ಯಾದಗಿರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ ಶೀಘ್ರ ಲಿಪಿಗಾರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು ಆರು ಹುದ್ದೆಗಳ ನೇಮಕಾತಿ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಜಿಲ್ಲಾ ನ್ಯಾಯಾಲಯದಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಪದವಿ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ವಿದ್ಯಾರ್ಹತೆ ಖಾಲಿ ಇರುವ ಈ ಆರು ಹುದ್ದೆಗೆ ಅರ್ಜಿ ಸಲ್ಲಿಸುವ ಆಕಾಂಕ್ಷಿಗಳು ದ್ವಿತೀಯ ಪಿಯುಸಿ ಮುಗಿಸಿರಬೇಕು. ಅಥವಾ ಅದಕ್ಕೆ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು. ಜೊತೆಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಭಾಷೆಯ ಶೀಘ್ರ ಲಿಪಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ವೇತನ: ಶೀಘ್ರ ಲಿಪಿಗಾರ ಹುದ್ದೆಗೆ 27,560 ರಿಂದ 52,650 ವರೆಗೆ ಮಾಸಿಕ ವೇತನ ನಿಗದಿಯಾಗಿರುತ್ತದೆ.
ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿದ್ದು, ಗರಿಷ್ಠ 35 ವರ್ಷ ವಯೋಮಿತಿ ಹೊಂದಿರಬೇಕು. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪ. ಜಾ, ಪ.ಪಂ ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ವಯೋಮಿಡಿ ಸಡಿಲಿಕೆ ನೀಡಲಾಗಿದೆ.
ಆಯ್ಕೆ ವಿಧಾನ: ಈ ಹುದ್ದೆಗಳನ್ನು ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು. ಲಿಖಿತ ಪರೀಕ್ಷೆಯಲ್ಲಿ ಟೈಪಿಂಗ್ ಸಾಮರ್ಥ್ಯದ ಪರೀಕ್ಷೆ ನಡೆಸಲಾಗಯುವುದು. ಅಭ್ಯರ್ಥಿಗಳು ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಪ್ರತಿ ನಿಮಿಷಕ್ಕೆ 120 ಪದಗಳ ವೇಗದಲ್ಲಿ ಟೈಪಿಂಗ್ ಸ್ಟೀಡ್ ಹೊಂದಿರಬೇಕು.
ಅರ್ಜಿ ಸಲ್ಲಿಕೆ: ಈ ಹುದ್ದೆಗೆ ಅಭ್ಯರ್ಥಿಗಳನ್ನು ಅನ್ಲೈನ್ ಮೂಲಕ ಅರ್ಜಿ ಸಲ್ಲಿಸ ಬಹುದಾಗಿದೆ. ಸಾಮಾನ್ಯ, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 200 ರೂ ಹಾಗೂ ಪ. ಜಾ ಮತ್ತು ಪ. ಪಂ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 100 ರೂ ಅರ್ಜಿ ಶುಲ್ಕ ನಿಗದಿಸಲಾಗಿದೆ.
ಅರ್ಜಿ ಸಲ್ಲಿಕೆ ದಿನಾಂಕ: ಈ ಹುದ್ದೆಗೆ ಈಗಾಗಲೇ ಅಧಿಸೂಚನೆ ಪ್ರಕಟಿಸಲಾಗಿದ್ದು, ಅರ್ಜಿ ಸಲ್ಲಿಕೆ ದಿನಾಂಕ ಮಾರ್ಚ್ 31ರಿಂದ ಆರಂಭವಾಗಲಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಏಪ್ರಿಲ್ 20 ಆಗಿರುತ್ತದೆ. ಆನ್ಲೈನ್ ಮೂಲಕ ಅರ್ಜಿ ಪಾವತಿ ಮಾಡಬಹುದಾಗಿದ್ದು, ಅರ್ಜಿ ಪಾವತಿಗೆ ಕಡೆಯ ದಿನಾಂಕ ಮೇ 3 ಆಗಿದೆ.
ಈ ಹುದ್ದೆ ಕುರಿತು ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಇತರೆ ವಿವರ ಪಡೆಯಲು ಅಭ್ಯರ್ಥಿಗಳು ಈ districts.ecourts.gov.in ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬಹುದಾಗಿದೆ.
ಇದನ್ನೂ ಓದಿ: ಚಿಕ್ಕಮಗಳೂರು ಮೆಡಿಕಲ್ ಕಾಲೇಜ್ನಲ್ಲಿ ನೇಮಕಾತಿ: ₹20 ಸಾವಿರ ವೇತನ