ಗುರುಮಠಕಲ್(ಯಾದಗಿರಿ): ಸೇಡಂ ತಾಲೂಕಿನ ಪಾಕಾಲ ಗ್ರಾಮದಲ್ಲಿ ಬೈಕ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ವಿದ್ಯಾರ್ಥಿಯೋರ್ವ ಮೃತಪಟ್ಟಿದ್ದಾನೆ. ಅತಿವೇಗವಾಗಿ ಸಂಚರಿಸುತ್ತಿದ್ದ ಲಾರಿ ಚಾಲಕ ಯಾವುದೇ ಸೂಚನೆ ನಿಡದೇ ಲಾರಿಯನ್ನು ಬಲಕ್ಕೆ ತಿರುಗಿಸಿದ್ದರ ಪರಿಣಾಮವಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ಆರೋಪಿಸಲಾಗಿದೆ.
ಮೃತ ವಿದ್ಯಾರ್ಥಿ ಅಂಜಪ್ಪ ಮದುವೆ ಸಮಾರಂಭದಲ್ಲಿ ಭಾಗವಹಿಸಲು ರಾಮಸಮುದ್ರಕ್ಕೆ ಬೈಕ್ನಲ್ಲಿ ತನ್ನಿಬ್ಬರು ಗೆಳೆಯರೊಂದಿಗೆ ತೆರಳುತ್ತಿದ್ದ. ಈ ವೇಳೆ ಅಪಘಾತ ಸಂಭವಿಸಿದ್ದು, ಉಳಿದ ಇಬ್ಬರಿಗೆ ಯಾವುದೇ ಗಾಯಗಳಾಗಿಲ್ಲ. ಅತಿ ವೇಗದಲ್ಲಿ ಚಲಿಸುತ್ತಿದ್ದ ಲಾರಿ ಚಾಲಕನು ಹಿಂದಿನಿಂದ ಬರುತ್ತಿದ್ದ ವಾಹನಗಳಿಗೆ ಯಾವುದೇ ಸೂಚನೆ ನೀಡದೇ ಲಾರಿಯನ್ನು ಬಲಕ್ಕೆ ತಿರುಗಿಸಿದ್ದೇ ಅಪಘಾತಕ್ಕೆ ಕಾರಣವೆಂದು ಆರೋಪಿಸಲಾಗಿದೆ.
ಇದನ್ನೂ ಓದಿ: ಟೊಮೆಟೊ, ನುಗ್ಗೇಕಾಯಿ ದುಬಾರಿ: ರಾಜ್ಯದಲ್ಲಿ ಇಂದಿನ ತರಕಾರಿ ಬೆಲೆ ಹೀಗಿದೆ..
ಸ್ಥಳಕ್ಕೆ ಗುರುಮಠಕಲ್ ಪಿಐ ಖಾಜಾಹುಸೇನ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದಿದ್ದಾರೆ. ಸದ್ಯ ಈ ಕುರಿತು ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.