ETV Bharat / state

ವಿದ್ಯಾರ್ಥಿ ವೇತನ ಕಡಿತ: ಯಾದಗಿರಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ, ಸರ್ಕಾರದ ಆದೇಶಕ್ಕೆ ಆಕ್ರೋಶ - ಯಾದಗಿರಿಯಲ್ಲಿಂದು AIDSO ವತಿಯಿಂದ ಪ್ರತಿಭಟನೆ

ಪ್ರಸಕ್ತ ಸಾಲಿನ ವಿದ್ಯಾರ್ಥಿಗಳ ವೇತನ ಕಡಿತಗೊಳಿಸಲು ಮುಂದಾಗಿರುವ ರಾಜ್ಯ ಸರ್ಕಾರದ ಆದೇಶವನ್ನು ಖಂಡಿಸಿ, ಯಾದಗಿರಿಯಲ್ಲಿಂದು AIDSO ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಯಾದಗಿರಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ
author img

By

Published : Nov 8, 2019, 5:34 PM IST

ಯಾದಗಿರಿ: ಪ್ರಸಕ್ತ ಸಾಲಿನ ವಿದ್ಯಾರ್ಥಿಗಳ ವೇತನ ಕಡಿತಗೊಳಿಸಲು ಮುಂದಾಗಿರುವ ರಾಜ್ಯ ಸರ್ಕಾರದ ಆದೇಶವನ್ನು ಖಂಡಿಸಿ, ನಗರದಲ್ಲಿಂದು AIDSO ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಕನಕ ವೃತ್ತದ ಬಳಿ ನಡೆಸಿದ ಪ್ರತಿಭಟನೆಯಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಕೂಡ ಭಾಗಿಯಾಗಿದ್ದರು.

ಈ ಹಿಂದೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2ನೇ ತರಗತಿಯಿಂದ 10ನೇ ತರಗತಿವರೆಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿತ್ತು. ಆದ್ರೆ ಇದೀಗ ಅನುದಾನ ಕೊರತೆಯ ನೆಪವೊಡ್ಡಿ ಸರ್ಕಾರ ನವೀಕರಣಗೊಂಡ 8ನೇ ತರಗತಿಯಿಂದ 10ನೇ ತರಗತಿಯ ವಿದ್ಯಾರ್ಥಿಗಳನ್ನು ಮಾತ್ರ ಪರಿಗಣಿಸಿದೆ. ಈ ಮೂಲಕ ರಾಜ್ಯ ಸರ್ಕಾರ ವಿದ್ಯಾರ್ಥಿಗಳನ್ನ ವಂಚಿಸುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಯಾದಗಿರಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

ವಿದ್ಯಾರ್ಥಿಗಳ ವೇತನ ಕಡಿತಗೊಳಿಸುತ್ತಿರುವ ರಾಜ್ಯ ಸರ್ಕಾರ, ತನ್ನ ಆದೇಶವನ್ನು ವಾಪಸ್ ಪಡೆಯಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

Intro:2019-20 ಸಾಲಿನ ವಿದ್ಯಾರ್ಥಗಳ ವೇತನ ಕಡತಗೊಳಿಸಲು ಮುಂದಾಗಿರುವ ರಾಜ್ಯ ಸರ್ಕಾರದ ಆದೇಶವನ್ನ ಖಂಡಿಸಿ ಯಾದಗಿರಿಯಲ್ಲಿಂದು AIDSo ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಕನಕ ವೃತ್ತದ ಬಳಿ ನಡೆಸಿದ ಪ್ರತಿಭನೆಯಲ್ಲಿ ವಿದ್ಯರ್ಥಿಗಳು ಕೂಡ ಭಾಗಿಯಾಗಿದ್ದರು. Body:ಈ ಹಿಂದೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2ನೇ ಯರಗತಿಯಿಂದ 10ನೇ ತರಗತಿ ವರೆಗೆ ವಿದ್ಯರ್ಥಿ ವೇತನ ನೀಡಲಾಗುತ್ತಿತ್ತು. ಆದ್ರೆ ಈಗ ಸರ್ಕಾರ ಅನುದಾನ ಕೊರತೆ ನೆಪವೋಡ್ಡಿ ನವಿಕರಣಗೊಂಡ 8ನೇ ತರಗತಿಯಿಂದ 10 ನೇ ತರಗತಿ ವಿಧ್ಯರ್ಥಿಗಳನ್ನ ಮಾತ್ರ ಪರಿಗಣಿಲಾಗಿದ್ದು, ರಾಜ್ಯ ಸರ್ಕಾರ ವಿಧ್ಯರ್ಥಿಗಳನ್ನ ವಂಚಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡೆಸಿದರು.Conclusion:ವಿದ್ಯರ್ಥಿಗಳ ವೇತನ ಕಡಿತಗೊಳಿಸುತ್ತಿರುವ ರಾಜ್ಯ ಸರ್ಕಾರ ತನ್ನ ಆದೇಶವನ್ನ ವಾಪಸ್ ಪಡೆಯಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಸ್ವರೂಪದ ಹೋರಾಟ ನಡೆಸಲಾಗುವದು ಅಂತ ಪ್ರತಿಭಟನಾಕಾರರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.