ಸುರಪುರ: 10ನೇ ತರಗತಿ ಪರೀಕ್ಷೆಗೆ ನಿತ್ಯವೂ ಸಮಯಕ್ಕೆ ಸರಿಯಾಗಿ ಕರೆದೊಯ್ದ ಸಾರಿಗೆ ಇಲಾಖೆ ಚಾಲಕ ಮತ್ತು ನಿರ್ವಾಹಕರಿಗೆ ಬಿಇಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ಸನ್ಮಾನ ಮಾಡಿದ್ರು.
ಬೆಳಗ್ಗೆ 5 ಗಂಟೆಗೆ ಬಸ್ಗಳನ್ನು ತೆಗೆದುಕೊಂಡು ಹೊರಟು ತಾಲೂಕಿನ ಕಟ್ಟಕಡೆಯ ಗ್ರಾಮದವರಿಗೆ ತಲುಪಿ ಮಕ್ಕಳನ್ನು ಸರಿಯಾದ ಸಮಯಕ್ಕೆ ಪರೀಕ್ಷಾ ಕೇಂದ್ರಕ್ಕೆ ಕರೆದುಕೊಂಡು ಬಂದು ಪರೀಕ್ಷೆ ಮುಗಿದ ನಂತರ ಪುನಃ ಅವರವರ ಊರುಗಳಿಗೆ ತಲುಪಿಸುವಂತ ಬಹುದೊಡ್ಡ ಜವಾಬ್ದಾರಿಯನ್ನು ನಿರ್ವಹಿಸಿದ್ದಾರೆ. ಹೀಗಾಗಿ ಸಾರಿಗೆ ಇಲಾಖೆಗೆ ಎಲ್ಲ ಮಕ್ಕಳ ಪರವಾಗಿ ಅಭಿನಂದಿಸಿದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ಬಸ್ಸಿನ ಚಾಲಕ ಮತ್ತು ನಿರ್ವಾಹಕರಿಗೆ ಶಾಲು ಹೊದಿಸಿ ಹೂಮಾಲೆ ಹಾಕಿ ಸನ್ಮಾನಿಸಿ ಕೃತಜ್ಞತೆ ಸಲ್ಲಿಸಿದರು.