ಯಾದಗಿರಿ: ಖಾಸಗಿ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೂ ಉಚಿತ ಲ್ಯಾಪ್ಟಾಪ್ ನೀಡುವಂತೆ ಆಗ್ರಹಿಸಿ ಜಿಲ್ಲೆಯ ಖಾಸಗಿ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ನಗರದ ಶಾಸ್ತ್ರಿ ವೃತ್ತದಿಂದ ತಹಶೀಲ್ದಾರ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದರು. ನೂರಾರು ವಿದ್ಯಾರ್ಥಿಗಳು ಲ್ಯಾಪ್ಟಾಪ್ ನೀಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಸರ್ಕಾರ ಮಲತಾಯಿ ಧೋರಣೆಯನ್ನು ತೋರುತ್ತಿದೆ. ಖಾಸಗಿ ಕಾಲೇಜುಗಳಲ್ಲೂ ಕೂಡ ಬಡ ಮತ್ತು ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.
ಕೂಡಲೇ ಬೇಡಿಕೆ ಈಡೇರಿಕೆಗೆ ಮುಂದಾಬೇಕು. ಇಲ್ಲವಾದರೆ ಉಗ್ರ ಹೋರಾಟಕ್ಕೆ ಮಾಡುವುದಾಗಿ ಎಚ್ಚರಿಕೆ ನೀಡಿದರು. ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.