ETV Bharat / state

ಎಪಿಎಂಸಿ ಕಾಯ್ದೆ ತಿದ್ದುಪಡಿ ಹಿಂಪಡೆಯುವಂತೆ ಆಗ್ರಹಿಸಿ ಪ್ರತಿಭಟನೆ - ಕರ್ನಾಟಕ ಪ್ರಾಂತ ಕೂಲಿಕಾರರ ಸಂಘ

ಕಾರ್ಪೊರೇಟ್ ಕಂಪನಿಗಳ ಪರವಾಗಿರುವ ರೈತ ವಿರೋಧಿಯಾದ ಎಪಿಎಂಸಿ ಕಾಯ್ದೆ ತಿದ್ದುಪಡಿಯನ್ನು ಕೂಡಲೇ ಹಿಂಪಡೆಯಬೇಕು. ವಿದ್ಯುತ್ ಕಾಯ್ದೆ ಮತ್ತು ಅಗತ್ಯ ವಸ್ತುಗಳ ಕಾಯ್ದೆ ಉಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಕರ್ನಾಟಕ ಪ್ರಾಂತ ಕೂಲಿಕಾರರ ಸಂಘದ ಮುಖಂಡರು ಸುರಪುರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ರು.

ಕರ್ನಾಟಕ ಪ್ರಾಂತ ರೈತ ಸಂಘಟನೆ ಪ್ರತಿಭಟನೆ
ಕರ್ನಾಟಕ ಪ್ರಾಂತ ರೈತ ಸಂಘಟನೆ ಪ್ರತಿಭಟನೆ
author img

By

Published : Jun 10, 2020, 4:00 PM IST

Updated : Jun 10, 2020, 5:58 PM IST

ಸುರಪುರ (ಯಾದಗಿರಿ): ಎಪಿಎಂಸಿ ಕಾಯ್ದೆ, ವಿದ್ಯುತ್ ಕಾಯ್ದೆ ಹಾಗೂ ಅಗತ್ಯ ವಸ್ತುಗಳ ಕಾಯ್ದೆಗೆ ಸುಗ್ರೀವಾಜ್ಞೆ ಹೊರಡಿಸಿ ಜಾರಿಗಳಿಸುತ್ತಿರುವುದನ್ನು ವಿರೋಧಿಸಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಕರ್ನಾಟಕ ಪ್ರಾಂತ ಕೂಲಿಕಾರರ ಸಂಘದ ಮುಖಂಡರು ನಗರದ ಡಾ. ಬಿ.ಆರ್​.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ರು.

ಎಪಿಎಂಸಿ ಕಾಯ್ದೆ ತಿದ್ದುಪಡಿ ಹಿಂಪಡೆಯುವಂತೆ ಆಗ್ರಹಿಸಿ ಪ್ರತಿಭಟನೆ

ಈ ಸಂದರ್ಭದಲ್ಲಿ ಮುಖಂಡರು ಮಾತನಾಡಿ, ಕಾರ್ಪೊರೇಟ್ ಕಂಪನಿಗಳ ಪರವಾಗಿರುವ ರೈತ ವಿರೋಧಿಯಾದ ಎಪಿಎಂಸಿ ಕಾಯ್ದೆ ತಿದ್ದುಪಡಿಯನ್ನು ಕೂಡಲೇ ಹಿಂಪಡೆಯಬೇಕು. ವಿದ್ಯುತ್ ಕಾಯ್ದೆ ಮತ್ತು ಅಗತ್ಯ ವಸ್ತುಗಳ ಕಾಯ್ದೆ ಉಳಿಸಬೇಕು. ಗ್ರಾಮೀಣ ಪ್ರದೇಶದ ಎಲ್ಲಾ ಕಸುಬುದಾರರಿಗೆ ಪರಿಹಾರ ನೀಡಬೇಕು. ಒಂದು ಕುಟುಂಬಕ್ಕೆ 15 ಕೆಜಿ ಅಕ್ಕಿ, ಬೇಳೆ, ಎಣ್ಣೆ, ಸಕ್ಕರೆ, ಉಪ್ಪು ಇತ್ಯಾದಿ ಪದಾರ್ಥಗಳನ್ನು ನೀಡಬೇಕು. ರೈತರ ಸಾಲ ಮನ್ನಾ ಮಾಡುವ ಜೊತೆಗೆ ಸಾಲ ವಸೂಲಾತಿ ಕೈಬಿಡಬೇಕೆಂದು ಆಗ್ರಹಿಸಿದರು.

ಸುಮಾರು ಒಂದು ಗಂಟೆಗಳ ಕಾಲ ಪ್ರತಿಭಟನೆ ನಡೆಸಿ ತಿದ್ದುಪಡಿ ಮಸೂದೆಗಳ ಪ್ರತಿಗೆ ಬೆಂಕಿ ಹಚ್ಚುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ, ತಹಶೀಲ್ದಾರ್​​ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

Last Updated : Jun 10, 2020, 5:58 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.