ಸುರಪುರ : ತಹಶೀಲ್ದಾರ್ ನಿಂಗಣ್ಣ ಬಿರಾದಾರ್ ಮಿಂಚಿನ ದಾಳಿ ನಡೆಸಿ ಅಕ್ರಮವಾಗಿ ಶೇಖರಿಸಿಟ್ಟ ಅಪಾರ ಪ್ರಮಾಣದ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ.
ತಾಲೂಕಿನ ದೇವಿಕೇರಾ ಗ್ರಾಮದ ಸಮೀಪದ ಹೊಲ ಒಂದರ ಗೋದಾಮಿನಲ್ಲಿ ಸಂಗ್ರಹಿಸಲಾದ ಅಪಾರ ಪ್ರಮಾಣದ ಅಕ್ಕಿ ವಶಪಡಿಸಿಕೊಂಡಿದ್ದಾರೆ.
ದಾಳಿಯಲ್ಲಿ ಆಹಾರ ನಿರೀಕ್ಷಕ ಅಪ್ಪಯ್ಯ ಹಿರೇಮಠ, ಪಿಎಸ್ಐ ಚಂದ್ರಶೇಖರ ನಾರಾಯಣಪುರ, ಸಿಡಿಪಿಒ ಲಾಲ್‌ಸಾಬ್ ಇತರ ಅಧಿಕಾರಿಗಳಿದ್ದಾರೆ.