ಸುರಪುರ: ತಾಲೂಕಿನ ಸೂಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಡ್ಡೋಡಗಿ ಗ್ರಾಮದ ಇಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು. ಹಾಗಾಗಿ ತಹಶೀಲ್ದಾರ್ ನಿಂಗಣ್ಣ ಬಿರಾದಾರ್ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರಲ್ಲಿ ಅರಿವು ಮೂಡಿಸಿದರು.
ಇದನ್ನು ತಿಳಿದು ತಹಶೀಲ್ದಾರ್ ನಿಂಗಣ್ಣ ಬಿರಾದಾರ್, ಗ್ರಾಮಕ್ಕೆ ಭೇಟಿ ನೀಡಿ ಜನರಿಗೆ ಭಯ ಪಡದಂತೆ ಜಾಗೃತಿ ಮೂಡಿಸಿದರು. ಇದೇ ವೇಳೆ ಕೊರೊನಾ ಸೊಂಕಿತರ ಮನೆಗೂ ಭೇಟಿ ನೀಡಿ ಚಿಂತಿಸದಂತೆ ಧೈರ್ಯ ತುಂಬಿದರು.