ಯಾದಗಿರಿ: ಜಿಲ್ಲೆಯ ಗುರುಮಠಕಲ್ ಪಟ್ಟಣದಲ್ಲಿ ತಹಶೀಲ್ದಾರ್ ಸಂಗಮೇಶ ಜಿಡಗೆ ಅವರು ನಿಯಮ ಬಾಹಿರವಾಗಿ ವ್ಯಾಪಾರ ನಡೆಸುತ್ತಿದ್ದ ಕೆಲ ಅಂಗಡಿಗಳ ಮೇಲೆ ದಾಳಿ ನಡೆಸಿದ್ದಾರೆ.
ಗುರುಮಠಕಲ್ ಪಟ್ಟಣದಲ್ಲಿ ಲಾಕ್ಡೌನ್ ನಿಯಮ ಉಲ್ಲಂಘನೆ ಮಾಡಿ, ಜನರು ಸಂಚಾರ ಮಾಡುತ್ತಿದ್ದರು. ಅಂಗಡಿಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಗುಂಪು-ಗುಂಪಾಗಿ ವ್ಯವಹಿಸುತ್ತಿದ್ದರು. ಅಲ್ಲದೆ, ಕೆಲ ಅಂಗಡಿಯವರು ನಿಯಮ ಉಲ್ಲಂಘಿಸಿ ವ್ಯಾಪಾರ-ವಹಿವಾಟು ನಡೆಸುತ್ತಿದ್ದವು.
ಈ ಮಾಹಿತಿ ತಿಳಿದ ತಹಶೀಲ್ದಾರ್ ದಾಳಿ ನಡೆಸಿ, ತುರ್ತು ಸೇವೆ ಅಂಗಡಿಗಳನ್ನ ಬಿಟ್ಟು ಬೇರೆಲ್ಲಾ ಅಂಗಡಿಗಳನ್ನ ಮುಚ್ಚಿಸಿ,ಎಚ್ಚರಿಕೆ ನೀಡಿದ್ದಾರೆ.