ETV Bharat / state

ಕೋವಿಡ್​ನಿಂದ ಮೃತಪಟ್ಟ ಹಿಂದೂ ವ್ಯಕ್ತಿಯ ಅಂತ್ಯಕ್ರಿಯೆ ನೆರವೇರಿಸಿದ ಮುಸ್ಲಿಂ ಯುವಕರು

ಕೊರೊನಾದಿಂದ ಮೃತಪಟ್ಟ ಹಿಂದೂ ವ್ಯಕ್ತಿಯ ಅಂತ್ಯಕ್ರಿಯೆಯನ್ನು ಮುಸ್ಲಿಂ ಯುವಕರು ನೆರವೇರಿಸಿ ಮಾನವೀಯತೆ ಮೆರೆದಿದ್ದಾರೆ.

The funeral of a Hindu man by a Muslim youth
ಹಿಂದು ವ್ಯಕ್ತಿಯ ಅಂತ್ಯಕ್ರಿಯೆ ಮಾಡಿ ಮಾನವೀಯತೆ ಮೆರೆದ ಮುಸ್ಲೀಂ ಯುವಕರು
author img

By

Published : Sep 17, 2020, 9:01 PM IST

ಯಾದಗಿರಿ: ಕೋವಿಡ್ ಸೋಂಕಿನಿಂದ ಮೃತಪಟ್ಟ ಹಿಂದೂ ವ್ಯಕ್ತಿಯ ಅಂತ್ಯಕ್ರಿಯೆ ಮಾಡುವ ಮೂಲಕ‌ ಮುಸ್ಲಿಂ ಯುವಕರು ಮಾನವೀಯತೆ ಮೆರೆದ ಘಟನೆ ಜಿಲ್ಲೆಯ ವಡಗೇರಾ ಪಟ್ಟಣದ ಹೊರಭಾಗದಲ್ಲಿ ನಡೆದಿದೆ.

ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ವಡಗೇರಾ ಪಟ್ಟಣದ ನಿವಾಸಿ ಕಲಬುರಗಿ ಆಸ್ಪತ್ರೆಯಲ್ಲಿ ಮಂಗಳವಾರ ಮೃತಪಟ್ಟಿದ್ದರು. ಮೃತದೇಹವನ್ನು ಆ್ಯಂಬುಲೆನ್ಸ್ ಮೂಲಕ ಗ್ರಾಮಕ್ಕೆ ನಿನ್ನೆ ಕಳುಹಿಸಿ ಕೊಡಲಾಗಿದೆ. ಆದ್ರೆ ಡಬ್ಲ್ಯೂಹೆಚ್ಒ ನಿಯಮದ ಪ್ರಕಾರ ಮೃತ ವ್ಯಕ್ತಿಯ ಅಂತ್ಯಸಂಸ್ಕಾರ ಮಾಡಲು ಆರೋಗ್ಯ ಇಲಾಖೆ ಸಿಬ್ಬಂದಿ ಬಾರದ ಕಾರಣ ತಡರಾತ್ರಿವರೆಗೆ ಅಂತ್ಯ ಸಂಸ್ಕಾರ ಮಾಡಲು ಪರದಾಡುವಂತಾಗಿತ್ತು.

ಹಿಂದು ವ್ಯಕ್ತಿಯ ಅಂತ್ಯಕ್ರಿಯೆ ಮಾಡಿ ಮಾನವೀಯತೆ ಮೆರೆದ ಮುಸ್ಲೀಂ ಯುವಕರು

ಮೃತ ವ್ಯಕ್ತಿಯ ಸಂಬಂಧಿಕರು ಹಾಗೂ ಗ್ರಾಮಸ್ಥರು ಅಂತ್ಯಸಂಸ್ಕಾರ ಮಾಡಲು ಮುಂದಾಗದ ಕಾರಣ ಶಹಾಪುರ ಪಟ್ಟಣದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ತಂಡದ ಯುವಕರು ಸ್ಥಳಕ್ಕಾಗಮಿಸಿ ಕೋವಿಡ್​​ನಿಂದ ಮೃತಪಟ್ಟ ವ್ಯಕ್ತಿಯ ಅಂತ್ಯಕ್ರಿಯೆ ನೆರವೇರಿಸಿದ್ದಾರೆ.‌ ಸಿಬ್ಬಂದಿ ಕೊರತೆ ನೆಪ ಹೇಳಿ ಅಂತ್ಯಕ್ರಿಯೆ ಮಾಡದ ಆರೋಗ್ಯ ಇಲಾಖೆ ವಿರುದ್ಧ ಈಗ ಟೀಕೆಗಳು ವ್ಯಕ್ತವಾಗಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.