ಯಾದಗಿರಿ: ಜಿಲ್ಲೆಯ ಜನರ ಬಹುದಿನದ ಕನಸಾಗಿದ್ದ ವೈದ್ಯಕೀಯ ಕಾಲೇಜು ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಲು ಇಂದು ನಗರಕ್ಕೆ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಆಗಮಿಸಲಿದ್ದಾರೆ.
ಇಂದು ಮಧ್ಯಾಹ್ನ 2 : 45 ಕ್ಕೆ ಬೀದರ್ ನಿಂದ ಹೆಲಿಕಾಪ್ಟರ್ ಮೂಲಕ ಯಾದಗಿರಿಗೆ ಆಗಮಿಸಿ ನಗರದ ಜಿಲ್ಲಾ ಕ್ರೀಡಾಂಗಣದ ಹೆಲಿಪ್ಯಾಡ್ ನಲ್ಲಿ ಇಳಿಯಲಿದ್ದಾರೆ. ನಂತರ ಅಲ್ಲಿಂದ ಮುದ್ನಾಳ್ ಗ್ರಾಮದ ಬಳಿ ಇರುವ ನೂತನ ಜಿಲ್ಲಾಸ್ಪತ್ರೆಗೆ ತೆರಳಿ ಹೊಸ ಜಿಲ್ಲಾಸ್ಪತ್ರೆ ಉದ್ಘಾಟನೆ ಕಾರ್ಯ ನೆರವೇರಿಸಲಿದ್ದಾರೆ.
ಅಲ್ಲದೆ, ಮೆಡಿಕಲ್ ಕಾಲೇಜು ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಈ ವೇಳೆ 532.91 ಕೋಟಿ ರೂಪಾಯಿ ವೆಚ್ಚದ ವಿವಿಧ ಕಾಮಗಾರಿಗೆ ಶಂಕು ಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಡಾ. ಅಶ್ವಥ್ ನಾರಾಯಣ್, ಸಚಿವ ಡಾ. ಸುಧಾಕರ್, ಪ್ರಭು ಚವ್ಹಾಣ್ ಸೇರಿದಂತೆ ಹಲವು ಗಣ್ಯರು ಭಾಗಿಯಾಗಲಿದ್ದಾರೆ.
ಓದಿ : ಇಂದು ಶರಣ ಭೂಮಿಯಲ್ಲಿ ಆಧುನಿಕ ಅನುಭವ ಮಂಟಪ ನಿರ್ಮಾಣಕ್ಕೆ ಸಿಎಂರಿಂದ ಅಡಿಗಲ್ಲು