ಯಾದಗಿರಿ: ಜಿಲ್ಲೆಯಲ್ಲಿ ಮಂಗಳವಾರ ಹೊಸದಾಗಿ 55 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.
ಈ ಮೂಲಕ ಸೋಂಕಿತರ ಸಂಖ್ಯೆ 7,847ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಆಸ್ಪತ್ರೆಗೆ ದಾಖಲಾದವರಲ್ಲಿ 161 ಜನ ಗುಣಮುಖರಾಗಿದ್ದಾರೆ. ಒಟ್ಟಾರೆ ಜಿಲ್ಲೆಯಲ್ಲಿ 6,806 ಮಂದಿ ಗುಣಮುಖರಾಗಿದ್ದಾರೆ.
ಕೊರೊನಾ ಸೋಂಕಿನಿಂದ ಜಿಲ್ಲೆಯಲ್ಲಿ ಒಟ್ಟು 49 ಜನರು ಮೃತಪಟ್ಟಿದ್ದಾರೆ. ಸಕ್ರಿಯ ಪ್ರಕರಣಗಳಲ್ಲಿ 991 ಮಂದಿ ಸೋಂಕಿತರು ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.