ETV Bharat / state

ಯಾದಗಿರಿಯಲ್ಲಿಂದು ಇಬ್ಬರಿಗೆ ಕೊರೊನಾ ಪಾಸಿಟಿವ್​ :909ಕ್ಕೆರಿದ ಸೋಂಕಿತರ ಸಂಖ್ಯೆ - Corona Positive cases in Yadgir

ಜಿಲ್ಲೆಯಲ್ಲಿಂದು ಮತ್ತೆ ಇಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಖಚಿತಪಟ್ಟ ಒಟ್ಟು 909 ಪ್ರಕರಣಗಳ ಪೈಕಿ 715 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಬ್ಬರು ಮೃತಪಟ್ಟಿರುತ್ತಾರೆ.

Yadgir
ಯಾದಗಿರಿಯಲ್ಲಿಂದು ಇಬ್ಬರಿಗೆ ಕೊರೊನಾ ಪಾಸಿಟಿವ್​
author img

By

Published : Jun 25, 2020, 10:33 PM IST

ಯಾದಗಿರಿ: ನೋವೆಲ್ ಕೊರೊನಾ ವೈರಸ್ ಪರೀಕ್ಷೆಗಾಗಿ ಜಿಲ್ಲೆಯಿಂದ ಕಳುಹಿಸಿದ ಮಾದರಿಗಳ ಪೈಕಿ ಗುರುವಾರ ಪಾಸಿಟಿವ್ ಬಂದ 2 ಮಾದರಿ ಸೇರಿದಂತೆ ಜೂನ್ 25 ರವರೆಗೆ ಒಟ್ಟು 909 ವರದಿ ಪಾಸಿಟಿವ್ ಬಂದಿವೆ. ಗುರುವಾರದ 250 ನೆಗೆಟಿವ್ ವರದಿ ಸೇರಿ ಈವರೆಗೆ 22,787 ಮಾದರಿಗಳ ವರದಿ ನೆಗೆಟಿವ್ ಬಂದಿವೆ. ಹೊಸದಾಗಿ ಕಳುಹಿಸಲಾದ 157 ಮಾದರಿಗಳು ಸೇರಿದಂತೆ 1135 ಮಾದರಿಗಳ ವರದಿ ಬರಬೇಕಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್-19 ಖಚಿತಪಟ್ಟ 909 ಪೈಕಿ ಗುರುವಾರ ಮತ್ತೆ 25 ಜನ ಗುಣಮುಖರಾಗಿದ್ದು, ಜೂನ್ 25ರವರೆಗೆ ಒಟ್ಟು 715 ಜನ ಗುಣಮುಖರಾಗಿರುತ್ತಾರೆ. ಒಬ್ಬರು ಮೃತಪಟ್ಟಿದ್ದಾರೆ. ಉಳಿದ 193 ಪ್ರಕರಣಗಳು ಸಕ್ರಿಯವಾಗಿರುತ್ತವೆ. ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 1,422 ಜನ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 2,827 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ. ಜಿಲ್ಲೆಯಲ್ಲಿ 76 ಕಂಟೇನ್‍ಮೆಂಟ್ ಝೋನ್‍ಗಳನ್ನು ರಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಹೊಸ ಜಿಲ್ಲಾಸ್ಪತ್ರೆಯಲ್ಲಿ 77 ಜನರನ್ನು ಪತ್ಯೇಕವಾಗಿರಿಸಲಾಗಿದೆ. ಶಹಾಪೂರ ಕೊರೊನಾ ಕೇರ್ ಸೆಂಟರ್​ನಲ್ಲಿ 38 ಜನರನ್ನು, ಸುರಪುರ ಕೊರೊನಾ ಕೇರ್ ಸೆಂಟರ್​ನಲ್ಲಿ 37 ಮತ್ತು ಬಂದಳ್ಳಿ ಏಕಲವ್ಯ ಕೊರೊನಾ ಕೇರ್ ಸೆಂಟರ್​ನಲ್ಲಿ 47 ಜನರನ್ನು ಅವಲೋಕನಕ್ಕಾಗಿ ಇರಿಸಲಾಗಿದೆ. ಜಿಲ್ಲೆಯ 16 ಇನ್‍ಸ್ಟಿಟ್ಯೂಷನಲ್ ಕ್ವಾರಂಟೈನ್ ಸೆಂಟರ್​ಗಳಲ್ಲಿ ಒಟ್ಟು 619 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.