ಯಾದಗಿರಿ: ಟಂಟಂ ವಾಹನ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿರುವ ದುರ್ಘಟನೆ ಯಾದಗಿರಿ ತಾಲೂಕಿನ ಸೈದಾಪುರ ಗ್ರಾಮದ ಸಮೀಪ ನಡೆದಿದೆ.
ಚಕ್ರತಾಂಡಾದ ನಿವಾಸಿಗಳಾದ ಠಾಕ್ರೆ ಚವ್ಹಾಣ್ (40) ಹಾಗೂ ಚನ್ಯಾ (30) ಮೃತರು. ಇನ್ನು ಘಟನೆಯಲ್ಲಿ 6 ಜನರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಕುರಿತು ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.