ಯಾದಗಿರಿ: ಇಲ್ಲಿನ ಸುರಪುರ ತಾಲೂಕಿನ ಸಮೀಪದ ಬಾವಿಯೊಂದರಲ್ಲಿ ಅಪರಿಚಿತ ಶವ ಪತ್ತೆಯಾಗಿದ್ದು, ಜನ ಬೆಚ್ಚಿಬಿದ್ದಿದ್ದಾರೆ.
ಕೈಕಾಲು ಕಟ್ಟಿದ ಸ್ಥಿತಿಯಲ್ಲಿ ದೇಹ ಪತ್ತೆಯಾಗಿದ್ದು, ದುಷ್ಕರ್ಮಿಗಳು ಕೊಲೆ ಮಾಡಿ ಬಾವಿಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ.
ಈ ಕುರಿತು ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಡಿವೈಎಸ್ಪಿ ಶಿವನಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ