ಯಾದಗಿರಿ: ಶಾಸಕ ವೆಂಕಟರೆಡ್ಡಿ ಮುದ್ನಾಳ ಅವರಿಗೆ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ವೀರಶೈವ ಲಿಂಗಾಯತ ರೆಡ್ಡಿ ಸಮಾಜದ ಮುಖಂಡರು ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ವೀರಶೈವ ಲಿಂಗಾಯತ ರೆಡ್ಡಿ ಸಮುದಾಯದ ಆರು ಶಾಸಕರಿದ್ದು ಯಾರೊಬ್ಬರಿಗೂ ಸಚಿವ ಸ್ಥಾನ ದೊರಕಿಲ್ಲ. ರಾಜ್ಯದಲ್ಲಿ 70 ಲಕ್ಷಕ್ಕೂ ಹೆಚ್ಚು ನಮ್ಮ ಸಮಾಜದ ಮತಗಳಿದ್ದು, ಬಹುತೇಕ ನಮ್ಮ ಸಮಾಜ ಬಿಜೆಪಿ ಪರ ಕೆಲಸ ಮಾಡಿದೆ ಅಂತ ನಮ್ಮ ವಿಶ್ವಾಸವಿದೆ. ಹೀಗಾಗಿ ಯಾದಗಿರಿ ಶಾಸಕ ವೆಂಕಟರೆಡ್ಡಿ ಮುದ್ನಾಳ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ವೀರಶೈವ ಲಿಂಗಾಯತ ರೆಡ್ಡಿ ಸಮಾಜವನ್ನ ಪರಿಗಣನೆಗೆ ತೆಗೆದುಕೊಳ್ಳಬೇಕು ಎಂದು ಜಿಲ್ಲಾ ವೀರಶೈವ ಲಿಂಗಾಯತರೆಡ್ಡಿ ಸಮಾಜದ ಮುಖಂಡರು ಮನವಿ ಮಾಡಿದರು.