ಯಾದಗಿರಿ: ಸರ್ಕಾರಿ ಮೆಡಿಕಲ್ ಕಾಲೇಜು ಮಂಜೂರಾತಿ ಮಾಡಬೇಕೆಂದು ಆಗ್ರಹಿಸಿ ಶಾಸಕ ವೆಂಕಟರೆಡ್ಡಿ ಮುದ್ನಾಳ ನೇತೃತ್ವದಲ್ಲಿ ನಾಳೆ ಯಾದಗಿರಿ ಬಂದ್ಗೆ ಕರೆ ನೀಡಲಾಗಿದೆ.
ನಗರದ ಎನ್ವಿಎಂ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಯಾದಗಿರಿಗೆ ಮಂಜೂರಾದ ಸರ್ಕಾರಿ ಮೆಡಿಕಲ್ ಕಾಲೇಜು ರದ್ದಾದ ಹಿನ್ನೆಲೆ ನಾಳೆ ಯಾದಗಿರಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.
ಸಿಎಂ ಕುಮಾರಸ್ವಾಮಿ ಗ್ರಾಮ ವಾಸ್ಯವಕ್ಕೆಂದು ಬಂದಾಗ ಯಾದಗಿರಿಗೆ ಸರ್ಕಾರಿ ಮೆಡಿಕಲ್ ಕಾಲೇಜು ಅವಶ್ಯಕತೆಯಿಲ್ಲ ಎಂದು ರದ್ದು ಮಾಡಲಾಗಿತ್ತು. ಆದ್ರೆ ಇದೀಗ ಪುನಃ ಮಂಜೂರು ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ಮಾಡಲಾಗುತ್ತಿದೆ. ಪ್ರತಿಭಟನೆಗೆ ಎಲ್ಲಾ ಕನ್ನಡಪರ ಸಂಘಟನೆಗಳು ಬೆಂಬಲ ನೀಡಲಿವೆ ಅಂತಾ ತಿಳಿಸಿದರು.