ಯಾದಗಿರಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾ ಗ್ರಾಮ ಲೆಕ್ಕಾಧಿಕಾರಿಗಳ ಸಂಘದಿಂದ ಯಾದಗಿರಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.
ಗ್ರಾಮ ಲೆಕ್ಕಾಧಿಕಾರಿಗಳ ಕುಂದುಕೊರತೆ ಹಾಗೂ ಅನ್ಯ ಇಲಾಖೆಯ ಕೆಲಸಕ್ಕೆ ಗ್ರಾಮ ಲೆಕ್ಕಾಧಿಕಾರಿಗಳ ಮೇಲೆ ಒತ್ತಡವನ್ನು ಹಾಕಲಾಗುತ್ತಿದ್ದು, ಮಾನಸಿಕವಾಗಿ ನಮ್ಮ ನೆಮ್ಮದಿಯು ಹಾಳಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಈ ಬಗ್ಗೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಆದರೆ, ಸರ್ಕಾರ ಮಾತ್ರ ಇನ್ನೂ ಹೆಚ್ಚಿನ ಕೆಲಸವನ್ನು ನೀಡುವ ಮುಖಾಂತರ ನಮ್ಮನ್ನು ನಿರ್ಲಕ್ಷ್ಯ ವಹಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರ ಈ ಬಗ್ಗೆ ಎಚ್ಚೆತ್ತಕೊಂಡು ಗ್ರಾಮಲೆಕ್ಕಾಧಿಕಾರಿಗಳಿಗೆ ಕೆಲಸದಲ್ಲಾಗುತ್ತಿರುವ ಮಾನಸಿಕವಾಗಿ ಕಿರುಕುಳವನ್ನು ತಪ್ಪಿಸಬೇಕೆಂದು ಆಗ್ರಹಿಸಿದ್ದಾರೆ.