ETV Bharat / state

ಕುಡಿವ ನೀರಿನ ಸಮಸ್ಯೆ: ಪ್ರತಿಭಟನೆಗೆ ಮುಂದಾದ ಗ್ರಾಮಸ್ಥರು

author img

By

Published : May 22, 2020, 9:23 PM IST

ಪೈಪ್ ಹಾನಿಯಾದ ಹಿನ್ನೆಲೆ ಹತ್ತಿಗೂಡುರು ಗ್ರಾಮಕ್ಕೆ ನೀರು ಸರಬರಾಜು ಆಗದೇ ಇರುವುದರಿಂದ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಭಣಗೊಂಡಿದೆ ಅಂತ ಆಕ್ರೋಶ ವ್ಯಕ್ತಪಡಿಸಿದರು.‌

Yadgiri
ಕುಡಿಯುವ ನೀರಿನ ಸಮಸ್ಯೆ: ಪ್ರತಿಭಟನೆಗೆ ಮುಂದಾದ ಗ್ರಾಮಸ್ಥರು

ಯಾದಗಿರಿ: ಕುಡಿಯುವ ನೀರಿಗೆ ಆಗ್ರಹಿಸಿ ಗ್ರಾಮಸ್ಥರು ಖಾಲಿ ಕೊಡಗಳು ಹಿಡಿದು ಗ್ರಾಮ ಪಂಚಾಯತ್​ಗೆ ಮುತ್ತಿಗೆ ಹಾಕುವ ಮೂಲಕ ಪ್ರತಿಭಟನೆ ನಡೆಸಿದರು.

ಜಿಲ್ಲೆಯ ಶಹಾಪುರ ತಾಲೂಕಿನ ಹತ್ತಿಗೂಡುರ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ವಿಭೂತಿಹಳ್ಳಿಯಿಂದ ಹತ್ತಿಗುಡೂರಿಗೆ ಸಂಪರ್ಕ ಕಲ್ಪಿಸುವ ನೀರಿನ ಪೈಪ್​ಗೆ ಕಿಡಿಗೇಡಿಗಳು ಕಲ್ಲು ಹಾಕಿ ಧ್ವಂಸಗೊಳಿಸಿದ್ದಾರೆ. ಪೈಪ್ ಹಾನಿಯಾದ ಹಿನ್ನೆಲೆ ಹತ್ತಿಗುಡೂರು ಗ್ರಾಮಕ್ಕೆ ನೀರು ಸರಬರಾಜು ಆಗದೇ ಇರುವುದರಿಂದ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಭಣಗೊಂಡಿದೆ ಅಂತ ಆಕ್ರೋಶ ವ್ಯಕ್ತಪಡಿಸಿದರು.‌

ಕಳೆದ ಮೂರ್ನಾಲ್ಕು ದಿನಗಳಿಂದ ಕುಡಿಯುವ ನೀರಿಗಾಗಿ ಗ್ರಾಮದ ಜನರು ಪರದಾಡುವಂತಾಗಿದೆ. ಕೊರೊನಾ ಲಾಕ್​ಡೌನ್ ಕೆಲಸದಲ್ಲಿ ಬಿಜಿ ಇರುವ ಅಧಿಕಾರಿಗಳು ತಮ್ಮ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಹೀಗಾಗಿ ಗ್ರಾಮದಲ್ಲಿ ಕುಡಿಯು ನೀರಿನ ಹಾಹಾಕಾರ ಸೃಷ್ಟಿಯಾಗಿದೆ. ಕೂಡಲೇ ಅಧಿಕಾರಿಗಳು ಇತ್ತ ಗಮನ ಹರಿಸಬೇಕು ಅಂತ ಪ್ರತಿಭಟನಾ ನಿರತ ಗ್ರಾಮಸ್ಥರು ಒತ್ತಾಯ ಮಾಡಿದರು.

ಕೊರೊನಾ ಭೀತಿ ಮಧ್ಯೆ ಹತ್ತಿಗುಡೂರು ಗ್ರಾಮಸ್ಥರು ಕುಡಿಯುವ ನೀರಿಗಾಗಿ ಪಂಚಾಯತ್​ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿತ್ತಿದ್ದ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪಿಡಿಒ ವಿರುದ್ದ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಎರಡ್ಮೂರು ದಿನಗಳಲ್ಲಿ ಪೈಪ್​ಲೈನ್ ದುರಸ್ಥಿಗೊಳಿಸಿ ನೀರು ಒದಗಿಸುವಂತೆ ಅಧಿಕಾರಿಗೆ ಮನವಿ ಮಾಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.