ETV Bharat / state

ಸನ್ನತಿ ಬ್ಯಾರೇಜ್​​ನಿಂದ ನೀರು ಬಿಡುಗಡೆ: ಭೀಮಾ ನದಿ ಪಾತ್ರದ ಜನರಲ್ಲಿ ಮತ್ತೆ ಆತಂಕ - water release from sannati barrage

ಕ್ಷಣ ಕ್ಷಣಕ್ಕೂ ಭೀಮಾ ನದಿಯಲ್ಲಿ ಹೆಚ್ಚುತ್ತಿರುವ ನೀರಿನಿಂದಾಗಿ ಈಗಾಗಲೇ ಸಂಕಷ್ಟಕ್ಕೆ ಸಿಲುಕಿರುವ ನದಿ ಪಾತ್ರದ ಗ್ರಾಮಸ್ಥರಿಗೆ ಮತ್ತೆ ಆತಂಕ ಶುರುವಾಗಿದೆ.

water release from sannati barrage to bhima river
ಸನ್ನತಿ ಬ್ಯಾರೇಜ್​​ನಿಂದ ಭೀಮಾ ನದಿಗೆ ನೀರು ಬಿಡುಗಡೆ
author img

By

Published : Oct 20, 2020, 11:27 AM IST

ಯಾದಗಿರಿ: ಸನ್ನತಿ ಬ್ಯಾರೇಜ್​​ನಿಂದ ಭೀಮಾ ನದಿಗೆ ಮತ್ತೆ ಭಾರೀ ಪ್ರಮಾಣದಲ್ಲಿ ನೀರು ಬಿಡಲಾಗುತ್ತಿದ್ದು, ನದಿ ಪಾತ್ರದ ಗ್ರಾಮಗಳಲ್ಲಿ ಮತ್ತಷ್ಟು ಪ್ರವಾಹ ಭೀತಿ ಎದುರಾಗಿದೆ.

ಕ್ಷಣ ಕ್ಷಣಕ್ಕೂ ಭೀಮಾ ನದಿಯಲ್ಲಿ ಹೆಚ್ಚುತ್ತಿರುವ ನೀರಿನಿಂದಾಗಿ ಈಗಾಗಲೇ ಸಂಕಷ್ಟಕ್ಕೆ ಸಿಲುಕಿರುವ ನದಿ ಪಾತ್ರದ ಗ್ರಾಮಸ್ಥರಿಗೆ ಮತ್ತೆ ಆತಂಕ ಶುರುವಾಗಿದೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸನ್ನತಿ ಬ್ಯಾರೇಜ್​​​ನಿಂದ 4 ಲಕ್ಷ ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದ್ದು, ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಸನ್ನತಿ ಬ್ಯಾರೇಜ್​​​​ನ ಒಳಹರಿವು 4 ಲಕ್ಷ ಕ್ಯೂಸೆಕ್ ಆಗಿದ್ದು, ಬ್ಯಾರೇಜ್​​ನ 31 ಗೇಟ್​​​ಗಳನ್ನು ತೆರೆಯುವ ಮೂಲಕ ಭೀಮಾ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡಲಾಗುತ್ತಿದೆ. ಒಟ್ಟು 2.28 ಟಿಎಂಸಿ ಸಾಮರ್ಥ್ಯ ಹೊಂದಿರುವ ಬ್ಯಾರೇಜ್​​ನಲ್ಲಿ 1.8 ಟಿಎಂಸಿ ನೀರು ಭರ್ತಿಯಾಗಿದೆ.

ಉಕ್ಕಿ ಹರಿಯುತ್ತಿರುವ ಭೀಮಾ ನದಿ ತೀರದ ಕೆಲ ಗ್ರಾಮಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗುತ್ತಿದ್ದು, ಜನ ಮತ್ತಷ್ಟು ಆತಂಕ ಪಡುವಂತಾಗಿದೆ. ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ನದಿ ಪಾತ್ರಕ್ಕೆ ಜನ-ಜಾನುವಾರುಗಳು ತೆರಳದಂತೆ ಎಚ್ಚರಿಕೆ ನೀಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.