ಯಾದಗಿರಿ: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಯಾದಗಿರಿ ಜಿಲ್ಲಾಡಳಿತ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
ನಗರದ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಚಿವ ಬಿ.ಶ್ರೀರಾಮುಲು, ಮಹಾತ್ಮ ಗಾಂಧಿ ಹಾಗೂ ಸರ್ದಾರ್ ವಲ್ಲಭಭಾಯ್ ಪಟೇಲ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ನಂತರ ತೆರೆದ ವಾಹನದಲ್ಲಿ ತೆರಳಿದ ಶ್ರೀರಾಮುಲು ಪರೇಡ್ ಪರಿವೀಕ್ಷಣೆ ನಡೆಸಿ, ಪಥಸಂಚಲನ ಮೂಲಕ ಗೌರವ ಒಂದನೇ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ಶಾಸಕ ವೆಂಕಟರೆಡ್ಡಿ ಮುದ್ನಾಳ, ಜಿಲ್ಲಾಧಿಕಾರಿ ಡಾ. ರಾಗಪ್ರಿಯ ಆರ್., ಪೋಲಿಸ್ ವರಿಷ್ಠಾಧಿಕಾರಿ ರಿಷಿಕೇಶ ಭಾಗವಾನ ಸೋನಾವಣೆ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.