ETV Bharat / state

ಮಕ್ಕಳಿಗೆ ಆಸ್ತಿ ನೀಡುವ ವಿಚಾರಕ್ಕೆ ಜಗಳ: ಹೆಂಡತಿಯನ್ನೇ ಕೊಡಲಿಯಿಂದ ಕೊಚ್ಚಿ ಕೊಂದ ಗಂಡ - ಗಂಡ-ಹೆಂಡತಿ ನಡುವೆ ಆಸ್ತಿ ಜಗಳ

ಆಸ್ತಿ ವಿಚಾರದಲ್ಲಿ ಗಂಡ-ಹೆಂಡತಿ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಯಾದಗಿರಿ ಜಿಲ್ಲೆಯ ಗುರುಮಠಕಲ್​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

kill
ಹೆಂಡತಿಯನ್ನೇ ಕೊಡಲಿಯಿಂದ ಕೊಚ್ಚಿ ಕೊಂದ ಗಂಡ
author img

By

Published : Jan 5, 2021, 11:00 AM IST

Updated : Jan 5, 2021, 11:40 AM IST

ಯಾದಗಿರಿ: ಆಸ್ತಿ ಜಗಳದಲ್ಲಿ ವ್ಯಕ್ತಿಯೊಬ್ಬ ಹೆಂಡತಿಯನ್ನೇ ಕೊಲೆಗೈದ ಘಟನೆ ಗುರುಮಠಕಲ್ ತಾಲೂಕಿನ ಗಾಜರಕೋಟ್ ಗ್ರಾಮದಲ್ಲಿ ನಡೆದಿದೆ.

ನರಸಮ್ಮ(40) ಭೀಕರವಾಗಿ ಕೊಲೆಯಾದ ಮಹಿಳೆ. ಹೆಂಡತಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗುತ್ತಿದ್ದ ಗಂಡನನ್ನು ಗ್ರಾಮಸ್ಥರು ಹಿಡಿದು ರಾತ್ರಿಯಿಡಿ ಮರಕ್ಕೆ ಕಟ್ಟಿ ಹಾಕಿದ್ದಾರೆ.

ನರಸಮ್ಮ ಭೀಮಣ್ಣನ ಎರಡನೇಯ ಹೆಂಡತಿ. ಮೊದಲ ಹೆಂಡತಿ ಮೃತಪಟ್ಟ ಹಿನ್ನೆಲೆ, ಭೀಮಣ್ಣ ನರಸಮ್ಮಳನ್ನು ಎರಡನೇ ಮದುವೆಯಾಗಿದ್ದ. ಭೀಮಣ್ಣನ ಮೊದಲ ಹೆಂಡತಿಗೆ ನಾಲ್ಕು ಜನ ಮಕ್ಕಳಿದ್ದು, ಮಕ್ಕಳಿಗೆ ಆಸ್ತಿ ನೀಡುವ ವಿಚಾರವಾಗಿ ಭೀಮಣ್ಣ ಮತ್ತು ನರಸಮ್ಮನ ನಡುವೆ ಆಗಾಗ ಜಗಳವಾಗುತ್ತಿತ್ತು. ನಿನ್ನೆ ತಡ ರಾತ್ರಿ ಜಗಳ ತಾರಕಕ್ಕೇರಿ ನರಸಮ್ಮಳನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ.

ಹೆಂಡತಿಯನ್ನೇ ಕೊಡಲಿಯಿಂದ ಕೊಚ್ಚಿ ಕೊಂದ ಗಂಡ

ಬಳಿಕ ಅಲ್ಲಿಂದ ಭೀಮಣ್ಣ ಪರಾರಿಯಾಗಲು ಯತ್ನಿಸಿದ್ದಾನೆ. ಗಾಬರಿಯಿಂದ ಭೀಮಣ್ಣ ಓಡುತ್ತಿರುವಾಗ ಆತನನ್ನು ಹಿಡಿದ ಗ್ರಾಮಸ್ಥರು ವಿಚಾರಿಸಿದಾಗ ಸತ್ಯ ಬಾಯಿಟ್ಟಿದ್ದಾನೆ. ಇದರಿಂದಾಗಿ ಕೋಪಗೊಂಡ ಗ್ರಾಮಸ್ಥರು, ಭೀಮಣ್ಣನನ್ನು ರಾತ್ರಿಯಿಡಿ ಮರಕ್ಕೆ ಕಟ್ಟಿ ಹಾಕಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು, ಭೀಮಣ್ಣನನ್ನು ಠಾಣೆಗೆ ಕರೆದುಕೊಂಡಿದ್ದಾರೆ. ಈ ವೇಳೆ ಪೊಲೀಸರು ಮತ್ತು ಗ್ರಾಮಸ್ಥರ ನಡುವೆ ಮಾತಿನಿ ಚಕಮಕಿ ಸಹ ನಡೆದಿದೆ. ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Last Updated : Jan 5, 2021, 11:40 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.