ETV Bharat / state

ಸಿಬ್ಬಂದಿ ನಿರ್ಲಕ್ಷ್ಯ ಆರೋಪ: ಆಸ್ಪತ್ರೆ ಒಳಾಂಗಣ ದಾರಿಯಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ - ತಾಯಿ ಮಕ್ಕಳ ಆಸ್ಪತ್ರೆ

ಮಹಿಳೆಯೊಬ್ಬರು ಆಸ್ಪತ್ರೆ ಒಳಾಂಗಣದ ದಾರಿಯಲ್ಲಿ ಮಗುವಿಗೆ ಜನ್ಮ ನೀಡಿರುವ ಘಟನೆ ಯಾದಗಿರಿ ನಗರದ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ನಡೆದಿದೆ. ಅಲ್ಲಿದ್ದ ಇಬ್ಬರು ಸಿಬ್ಬಂದಿ ಗಮನಕ್ಕೆ ತಂದಾಗ ಅವರು ಸಕಾಲಕ್ಕೆ ಬಾರದೇ ನಿರ್ಲಕ್ಷ್ಯ ಧೋರಣೆ ತಾಳಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

Mother Childrens Hospital
ಆಸ್ಪತ್ರೆ ಒಳಾಂಗಣ ದಾರಿಯಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ
author img

By

Published : Nov 27, 2022, 5:16 PM IST

ಯಾದಗಿರಿ: ಸರ್ಕಾರಿ ಆಸ್ಪತ್ರೆಯೊಂದರಲ್ಲಿ ವೈದ್ಯೆಯರು ಬಾಣಂತಿ ಡಿಸ್ಚಾರ್ಜ್‍ಗೆ ಲಂಚಕ್ಕೆ ಬೇಡಿಕೆಯಿಟ್ಟ ಪ್ರಕರಣ ಮಾಸುವ ಮುನ್ನವೇ, ಸಕಾಲಕ್ಕೆ ಸಿಬ್ಬಂದಿ ಬಾರದೇ ಆಸ್ಪತ್ರೆ ಒಳಾಂಗಣದ ದಾರಿಯಲ್ಲಿ ಹೆರಿಗೆಯಾದ ಘಟನೆ ಶನಿವಾರ ತಡರಾತ್ರಿ ಯಾದಗಿರಿ ನಗರದ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ನಡೆದಿದೆ.

ಶನಿವಾರ ತಡರಾತ್ರಿ 12 ಗಂಟೆಗೆ ಆಸ್ಪತ್ರೆಗೆ ಮಹಿಳೆಯನ್ನು ಆಕೆಯ ಪತಿ ನವಾಜ್ ಕರೆದುಕೊಂಡು ಬಂದಿದ್ದಾರೆ. ಅಲ್ಲಿದ್ದ ಇಬ್ಬರು ಸಿಬ್ಬಂದಿ ಗಮನಕ್ಕೆ ತಂದಾಗ ಅವರು ಸಕಾಲಕ್ಕೆ ಬಾರದೇ ನಿರ್ಲಕ್ಷ್ಯ ಧೋರಣೆ ತಾಳಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ನಂತರ ಗರ್ಭಿಣಿಯ ನರಳಾಟ ಹೆಚ್ಚಾದ ಕಾರಣ ಆಸ್ಪತ್ರೆಗೆ ಬಂದಿದ್ದ ಮಹಿಳೆಯೊಬ್ಬರ ಸಹಾಯ ಪಡೆದು, ನವಾಜ್​ ತಮ್ಮ ಟವೆಲ್​ನನ್ನು ಮರೆ ಮಾಡಿ ಪತ್ನಿ ಹೆರಿಗೆ ಮಾಡಿಸಿದ್ದಾರೆ ಎನ್ನಲಾಗ್ತಿದೆ.

ಆಸ್ಪತ್ರೆ ಒಳಾಂಗಣ ದಾರಿಯಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ

ಇದನ್ನೂ ಓದಿ: ಬಿಡದಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಂಚಕ್ಕೆ ಬೇಡಿಕೆ ಇಟ್ಟವರ ಅಮಾನತು

ಗರ್ಭಿಣಿ ಚಂದಾಬೀ ಅವರು ಗಂಡು ಮಗುವಿಗೆ ಜನ್ಮ ನೀಡಿದ ನಂತರ ಆಗಮಿಸಿದ ಸಿಬ್ಬಂದಿ ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದಾರೆ. ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಒಂದು ವೇಳೆ ಅಪಾಯ ಸಂಭವಿಸಿದ್ದರೆ, ಯಾರು ಹೊಣೆ? ಎಂದು ಜನರು ಪ್ರಶ್ನಿಸುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.