ಯಾದಗಿರಿ: ಜಿಲ್ಲೆಯಲ್ಲಿ 112 ಜನರಿಗೆ ಕೊರೊನಾ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 5,754ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ನಿನ್ನೆ 36 ಜನರು ಸೇರಿದಂತೆ ಒಟ್ಟಾರೆ ಇದುವರೆಗೆ 4,303 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 41 ಜನರು ಮೃತಪಟ್ಟಿದ್ದಾರೆ.
ಕೋವಿಡ್ ಸಕ್ರಿಯ ಪ್ರಕರಣಗಳಲ್ಲಿ 1,410 ಮಂದಿ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ ವರದಿಯಾದ 112 ಪ್ರಕರಣಗಳಲ್ಲಿ 40 ಜನ ಯಾದಗಿರಿ ನಗರ ಮತ್ತು ಗ್ರಾಮೀಣ ಪ್ರದೇಶವರು, 47 ಜನ ಶಹಾಪುರ ತಾಲ್ಲೂಕಿನ ನಗರ ಮತ್ತು ಗ್ರಾಮೀಣ ಭಾಗದವರಾಗಿದ್ದಾರೆ.