ಯಾದಗಿರಿ: ಜಿಲ್ಲೆಯಲ್ಲಿಂದು ಹೊಸದಾಗಿ 44 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 8,172ಕ್ಕೆ ಏರಿಕೆಯಾಗಿದೆ.
ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದವರಲ್ಲಿ ಇಂದು 88 ಜನ ಸಂಪೂರ್ಣ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 7,277 ಮಂದಿ ಗುಣಮುಖರಾಗಿದ್ದಾರೆ. ಇಂದು ಕೊರೊನಾ ಸೋಂಕಿಗೆ ಒಬ್ಬರು ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಇಲ್ಲಿಯವರೆಗೆ 50 ಜನರು ಮೃತಪಟ್ಟಿದ್ದಾರೆ.
ಕೋವಿಡ್ ಸಕ್ರಿಯ ಪ್ರಕರಣಗಳಲ್ಲಿ 845 ಮಂದಿ ಸೋಂಕಿತರು ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.