ETV Bharat / state

ಯಾದಗಿರಿ: ಭೂಸುಧಾರಣಾ ಕಾಯ್ದೆ ವಿರೋಧಿಸಿ ರೈತ ಸಂಘ ಪ್ರತಿಭಟನೆ - Land Reform Bill passed

ರಾಜ್ಯ ಸರ್ಕಾರ ಜಾರಿ ತರಲು ಮುಂದಾಗಿರುವ ಭೂಸುಧಾರಣಾ ಕಾಯ್ದೆಯ ವಿರುದ್ಧ ರಾಜ್ಯದೆಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆ ಯಾದಗರಿಯಲ್ಲಿ ಈ ಕಾಯ್ದೆಯನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸಿದ್ದಾರೆ. ಸರ್ಕಾರ ಯಾವುದೇ ಕಾರಣಕ್ಕೂ ಕಾಯ್ದೆ ಜಾರಿ ಮಾಡಬಾರದು ಎಂದು ಆಗ್ರಹಿಸಿದ್ದಾರೆ.

Yadagiri: Farmers' union protesting against  Land Reform Act
ಯಾದಗಿರಿ: ಭೂಸುಧಾರಣಾ ಕಾಯ್ದೆ ವಿರೋಧಿಸಿ ರೈತ ಸಂಘ ಪ್ರತಿಭಟನೆ
author img

By

Published : Jun 17, 2020, 8:57 PM IST

ಯಾದಗಿರಿ: ರಾಜ್ಯ ಸರ್ಕಾರ ಜಾರಿಗೊಳಿಸಲು ಹೊರಟಿರುವ ಕರ್ನಾಟಕ ಭೂಸುಧಾರಣಾ ಕಾಯ್ದೆಯನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಸುಭಾಷ್ ವೃತ್ತದಲ್ಲಿ ಪ್ರತಿಭಟನೆ ನಡಸಿದ ಪ್ರತಿಭಟನಾಕಾರರು, ಕೂಡಲೆ ರಾಜ್ಯ ಸರ್ಕಾರ ಹೊಸದಾಗಿ ಜಾರಿಗೆ ತರಲು ಹೊರಟಿರುವ ಕರ್ನಾಟಕ ಭೂಸುಧಾರಣಾ ಕಾಯ್ದೆಯನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.

ಯಾದಗಿರಿ: ಭೂಸುಧಾರಣಾ ಕಾಯ್ದೆ ವಿರೋಧಿಸಿ ರೈತ ಸಂಘ ಪ್ರತಿಭಟನೆ

ರೈತ ವಿರೋಧಿ ಕಾಯ್ದೆಯ ಮೂಲಕ ಸರ್ಕಾರ ಬಂಡವಾಳ ಶಾಹಿಗಳಿಗೆ ಮಣೆ ಹಾಕಲು ಹುನ್ನಾರ ನಡೆಸುತ್ತಿದೆ ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.

ಈ ಕಾಯ್ದೆಯಿಂದ ಇಡೀ ಭೂಮಿ ಉಳ್ಳವರ ಪಾಲಾಗಿ ರೈತಾಪಿ ವರ್ಗ ಬೀದಿ ಪಾಲಾಗಲಿದೆ. ರೈತರ ಹಿತದೃಷ್ಟಿಯಿಂದ ಸರ್ಕಾರ ಯಾವುದೇ ಕಾರಣಕ್ಕೂ ಈ ಮಸೂದೆಗೆ ಅನುಮೋದನೆಯನ್ನು ನೀಡಬಾರದು ಎಂದು ಒತ್ತಾಯಿಸಿದರು.

ಒಂದು ವೇಳೆ ಸರ್ಕಾರ ಈ ಕಾಯ್ದೆಯನ್ನು ಜಾರಿಗೊಳಿಸಿದ್ದೇ ಆದರೆ ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಕರ್ನಾಟಕ ರಾಜ್ಯ ರೈತ ಸಂಘದಿಂದ ಉಗ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.