ಯಾದಗಿರಿ: ಮೂರನೇ ಹಂತದ ಕೋವಿಡ್ ಲಸಿಕೆ ಪಡೆಯಲು ಗ್ರಾಮೀಣ ಭಾಗದಲ್ಲಿ ಜನರು ಮುಗಿಬಿದ್ದಿದ್ದಾರೆ. ಲಸಿಕೆ ಪಡೆಯಲು ಕೊರೊನಾ ಸೈನಿಕರು ಹಿಂದೇಟು ಹಾಕಿದ್ರೆ, ಗ್ರಾಮೀಣ ಭಾಗದ ಜನರು ಮಾತ್ರ ಹೆಚ್ಚಿನ ಆಸಕ್ತಿ ವಹಿಸಿ ಲಸಿಕೆ ಪಡೆಯಲು ಮುಂದಾಗುತ್ತಿದ್ದಾರೆ.
ಯಾದಗಿರಿ ಜಿಲ್ಲೆಯಲ್ಲಿ ಈಗಾಗಲೇ 53 ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಗೂ ಎರಡು ಖಾಸಗಿ ಆಸ್ಪತ್ರೆಗಳಲ್ಲಿ ಆರೋಗ್ಯ ಇಲಾಖೆ ವತಿಯಿಂದ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ 10 ಸಾವಿರ ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ. ಆದರೆ ನಿಗದಿತ ಗುರಿ ಮುಟ್ಟಲು ಸಾಧ್ಯವಾಗಿಲ್ಲ. ಈಗ ಎರಡನೇ ಕೋವಿಡ್ ಅಲೆ ಆರಂಭವಾಗಿದ್ದು, ಆತಂಕಗೊಂಡ ಗ್ರಾಮೀಣ ಭಾಗದ ಜನರು ಲಸಿಕೆ ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಉತ್ಸುಕರಾಗಿ ಲಸಿಕೆ ಪಡೆಯುತ್ತಿದ್ದಾರೆ.
ಓದಿ:ಯಾವ ಸಿಡಿ ಸತ್ಯ, ಸುಳ್ಳು ಎಂಬುದನ್ನು ತಿಳಿಯಲು ನಿಷ್ಪಕ್ಷಪಾತ ತನಿಖೆಯಾಗಲಿ: ಈಶ್ವರ್ ಖಂಡ್ರೆ
ಯಾದಗಿರಿ ತಾಲೂಕಿನ ಮುದ್ನಾಳ ಗ್ರಾಮದಲ್ಲಿ ಇಂದಿನಿಂದ ಲಸಿಕೆ ನೀಡಲಾಗುತಿದ್ದು, ಮುದ್ನಾಳ ಪಂಚಾಯಿತಿ ಕಚೇರಿಯಲ್ಲಿ ಲಸಿಕೆ ನೀಡಲಾಗುತಿದೆ. ಹಿರಿಯರು ಹಾಗೂ ಅನಾರೋಗ್ಯ ಪೀಡಿತರು ಲಸಿಕೆ ಪಡೆದಿದ್ದಾರೆ. ಗ್ರಾಮೀಣ ಭಾಗದ ಲಸಿಕೆ ನೀಡುವ ಅಭಿಯಾನಕ್ಕೆ ಮುದ್ನಾಳ ಗ್ರಾಮದಲ್ಲಿ ಶಾಸಕ ವೆಂಕಟರೆಡ್ಡಿ ಮುದ್ನಾಳ ಚಾಲನೆ ನೀಡಿದರು. ಯಾರು ಕೂಡ ಆತಂಕಗೊಳ್ಳದೇ ಲಸಿಕೆ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಡಾ. ಆರ್.ರಾಗಪ್ರಿಯಾ, ಶಾಸಕ ವೆಂಕಟರೆಡ್ಡಿ ಮುದ್ನಾಳ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾ ಶರ್ಮಾ ಜನರಲ್ಲಿ ಅರಿವು ಮೂಡಿಸಿದ್ರು.