ಯಾದಗಿರಿ: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಪ್ರಕರಣದ ಹಿನ್ನೆಲೆ, ಜಿಲ್ಲೆಯ ಅತಿಸೂಕ್ಷ್ಮ ಪ್ರದೇಶವಾದ ನಾರಾಯಣಪುರ ಬಸವಸಾಗರ ಜಲಾಶಯಕ್ಕೆ ವ್ಯಾಪಕ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.
ಈಗಾಗಲೇ ಜಿಲ್ಲಾದ್ಯಂತ ಪೊಲೀಸ್ ಇಲಾಖೆ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಳಿ ಇರುವ ಅತಿಸೂಕ್ಷ್ಮ ಪ್ರದೇಶವಾದ ಬಸವಸಾಗರ ಜಲಾಶಯಕ್ಕೆ ಭೀತಿ ಹಿನ್ನೆಲೆ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಬಸವಸಾಗರ ಜಲಾಶಯವು ಯಾದಗಿರಿ, ವಿಜಯಪುರ, ರಾಯಚೂರು ಜಿಲ್ಲೆ ವ್ಯಾಪ್ತಿಗೆ ಬರುವುದಾಗಿದ್ದು ಮೂರು ಜಿಲ್ಲೆಗಳ ಪೊಲೀಸ್ ಇಲಾಖೆಯಿಂದ 15ಕ್ಕೂ ಹೆಚ್ಚು ಪೊಲೀಸರನ್ನ ನಿಯೋಜನೆ ಮಾಡಲಾಗಿದೆ.
ಹೈ ಅಲರ್ಟ್ ಹಿನ್ನೆಲೆ ಡ್ಯಾಂಗೆ ಖಾಸಗಿ ಸೆಕ್ಯುರಿಟಿ ಗಾರ್ಡ್ಗಳನ್ನ ಅಳವಡಿಸಲಾಗಿದ್ದು, ಡ್ಯಾಮ್ ಗೆ ಬರುವ ಜನರಲ್ಲಿ ಸಂಶಯಾಸ್ಪದ ವ್ಯಕ್ತಿಗಳ ಮೇಲೆ ತೀವ್ರ ನಿಗಾ ವಹಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನಾವನೆ ತಮ್ಮ ಅಧಿಕಾರಿಗಳಿಗೆ ಸೂಚಿಸಿದ್ದಾರೆ.