ಯಾದಗಿರಿ: ಲಾಕ್ಡೌನ್ ಅವಧಿಯ ವೇತನವನ್ನು ಎಲ್ಲಾ ಹೊರಗುತ್ತಿಗೆ ಕಾರ್ಮಿಕರಿಗೆ ಈ ಕೂಡಲೇ ಪಾವತಿಸಬೇಕು. ಜೂನ್ ತಿಂಗಳಿನಿಂದ ವೇತನ ಪಾವತಿ ಮಾಡಿ ಕಾರ್ಮಿಕರಿಗೆ ಕೆಲಸ ಕೊಡಬೇಕು ಎಂದು ಆಗ್ರಹಿಸಿ ಎಐಯುಟಿಯುಸಿ ಸಂಘಟನೆ ಪ್ರತಿಭಟನೆ ನಡೆಸಿತು.
ನಗರದ ಸುಭಾಷ್ ವೃತ್ತದಿಂದ ಜಿಲ್ಲಾಡಳಿತ ಭವನದವರೆಗೆ ಸಂಘಟನೆ ಕಾರ್ಯಕರ್ತರು ಮೆರವಣಿಗೆ ನಡೆಸಿದರು. ವಿವಿಧ ಸೌಲಭ್ಯಗಳನ್ನು ಪಡೆದುಕೊಳ್ಳಲು ಇಎಸ್ಐ ಮತ್ತು ಇಪಿಎಫ್ ಅನ್ನು ಪಾವತಿ ಮಾಡಿರುವ ದಾಖಲೆಗಳನ್ನು ಕಾರ್ಮಿಕರಿಗೆ ನೀಡಬೇಕು. ಇಲ್ಲವಾದ್ರೆ ಇಲಾಖೆಯಿಂದ ಸೌಲಭ್ಯಗಳನ್ನು ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಜಿಲ್ಲೆಯಲ್ಲಿ ಲಾಕ್ಡೌನ್ ಅವಧಿಯ ಹಿಂದಿನ ತಿಂಗಳುಗಳಲ್ಲಿ ಬಾಕಿ ಉಳಿಸಿಕೊಂಡಿರುವ ವೇತನವನ್ನು ತಕ್ಷಣವೇ ಪಾವತಿಸಬೇಕು. ಜೊತೆಗೆ ಕ್ವಾರಂಟೈನ್ ಕೇಂದ್ರಗಳಲ್ಲಿ ಕೆಲಸ ಮಾಡಿರುವ ಕಾರ್ಮಿಕರಿಗೆ ಜಿಲ್ಲಾಡಳಿತದ ಆದೇಶದಂತೆ ವೇತನ ನೀಡಬೇಕೆಂದರು. ಬಳಿಕ ಪ್ರತಿಭಟನಕಾರರು ಜಿಲ್ಲಾಧಿಕಾರಿಗಳ ಮೂಲಕ ಸಿಎಂಗೆ ಮನವಿ ಸಲ್ಲಿಸಿದ್ರು.