ಯಾದಗಿರಿ: ಜಲಾಶಯದಿಂದ ಹೆಚ್ಚುವರಿ ನೀರು ಹೊರಬಿಟ್ಟ ಹಿನ್ನೆಲೆ ಜಿಲ್ಲೆಯ ಹಲವು ಗ್ರಾಮಗಳು ಜಲಾವೃತವಾಗಿದ್ದು, ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.
ಜಿಲ್ಲೆಯ ಹುಣಸಗಿ ತಾಲೂಕು ನಾರಾಯಣಪುರ ಗ್ರಾಮದ ಬಸವ ಸಾಗರ ಜಲಾಶಯದ ಒಳಹರಿವು ಹೆಚ್ಚಾದ ಹಿನ್ನೆಲೆ ಕೃಷ್ಣ ಭಾಗ್ಯ ಜಲ ನಿಗಮ ಅಧಿಕಾರಿಗಳು 4,51,791 ಕ್ಯೂಸೆಕ್ ನೀರು ಹೊರ ಬಿಟ್ಟಿದ್ದಾರೆ. ಈ ಹಿನ್ನೆಲೆ ನದಿ ಪಾತ್ರದ ಜಮೀನುಗಳು ಹಾಗೂ ಗ್ರಾಮಗಳು ಸಂಪೂರ್ಣವಾಗಿ ಜಲಾವೃತವಾಗಿವೆ.
ಹೀಗಾಗಿ ಜಿಲ್ಲಾಡಳಿತದ ವತಿಯಿಂದ ಸುರಪುರ ವಿಧಾನಸಭಾ ಕ್ಷೇತ್ರದ ಶೆಳ್ಳಗಿ ಹಾಗೂ ಶಹಾಪುರ ತಾಲೂಕಿನ ಕೊಳ್ಳೂರ, ಗೌಡಗೇರಾ, ಹೆಮ್ಮಡಗಿ, ಸೂಗರು ಗ್ರಾಮಸ್ಥರನ್ನು ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ.
ಪರಿಹಾರ ಕೇಂದ್ರಗಳಲ್ಲಿ ಪ್ರವಾಹ ಸಂತ್ರಸ್ತರಿಗೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಏರ್ಪಡಿಸಲಾಗಿದೆ.